ಉಡುಪಿ: ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ಆದರೆ ಹಿಜಬ್ ಕುರಿತಾದ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಲಿಲ್ಲ ಎಂದು ಉಡುಪಿಯ ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಆಕ್ರೋಶ ವ್ಯಕ್ತಪಡಿಸಿದಳು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ನಾವು ವಿಜ್ಞಾನದ ರೆಕಾರ್ಡ್ ಬುಕ್ ಪೂರ್ಣಗೊಳಿಸಿದ್ದೇನೆ. ಅಪಾರ ನಿರೀಕ್ಷೆಯೊಂದಿಗೆ ನಾವು ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗಿದ್ದೆವು. ನಮ್ಮ ಪ್ರಾಂಶುಪಾಲರು ನಮಗೆ ಪರೀಕ್ಷೆ ಬರೆಯುವ ಅವಕಾಶ ಕೊಡಲಿಲ್ಲ ಎಂದು ಕಿಡಿಕಾರಿದಳು.
Today was our final practical exam!
We had completed our record books and went in great hopes to attend the practical exam.
It was so disheartening when our principal threatened us saying, “You have 5 mins to leave, if you don’t leave, I’ll file a police complaint”
— Almas (@Ah_Almas12) February 28, 2022
ಪ್ರಾಂಶುಪಾಲರು 5 ನಿಮಿಷದಲ್ಲಿ ಜಾಗ ಖಾಲಿ ಮಾಡದಿದ್ದರೆ, ಪೊಲೀಸ್ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಂದುಕೊಂಡಂತೆ ನಡೆದಿದ್ದರೆ ನಾವು ಲ್ಯಾಬ್ ಪರೀಕ್ಷೆ ಬರೆದು ಮುಗಿಸಬೇಕಿತ್ತು. ಹಿಜಬ್ ಕುರಿತಾದ ದ್ವೇಷದಿಂದ ಈ ಪರಿಸ್ಥಿತಿ ನಮಗೆ ಬಂದೊದಗಿದೆ ಎಂದು ವಾಗ್ದಾಳಿ ನಡೆಸಿದಳು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
ಟ್ವೀಟ್‍ನಲ್ಲಿ ವಿದ್ಯಾರ್ಥಿನಿ ಅಲ್ಮಾಸ್ ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ, ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಡಿಜಿಪಿ, ಉಡುಪಿ ಡಿಸಿ, ಉಡುಪಿ ಎಸ್‍ಪಿಗೆ ಟ್ಯಾಗ್ ಮಾಡಿದ್ದಾಳೆ. ಅಲ್ಮಾಸ್ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಹೈಕೋರ್ಟ್‍ನಲ್ಲಿ ರಿಟ್ ಹಾಕಿರುವ ಆರು ವಿದ್ಯಾರ್ಥಿನಿಯರಲ್ಲಿ ಇವಳು ಒಬ್ಬಳಾಗಿದ್ದಾಳೆ. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ