ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸೂರತ್ಕಲ್, ದಿ ಮಿಸ್ಟೀರಿಯಸ್ ಕೇಸ್ ಆಫ಼್ ಮಾಯಾವಿ’ ಸಿನಿಮಾದ ಮತ್ತೊಂದು ಪೋಸ್ಟರ್ ಅನ್ನು ಶಿವರಾತ್ರಿ ದಿನದಂದು ಬಿಡುಗಡೆ ಮಾಡಿದೆ ಚಿತ್ರತಂಡ. ಈ ಸಿನಿಮಾದ ಕೆಲ ಮಾಹಿತಿಯನ್ನು ನಿರ್ದೇಶಕ ಆಕಾಶ್ ಶ್ರೀವತ್ಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ
“ಶಿವಾಜಿಯವರ ಖಾಸಗಿ ಜೀವನವನ್ನು ಮತ್ತಷ್ಟು ಹತ್ತಿರದಿಂದ ನೋಡುತ್ತೇವೆ. ಚಿತ್ರವೂ ಮೂರು ಕಾಲಘಟ್ಟಗಳನ್ನು ಒಳಗೊಂಡಿದ್ದು, ಮೂರು ತಲೆಮಾರುಗಳನ್ನೂ ಒಟ್ಟಿಗೆ ತರಲಿದೆ. ಶಿವಾಜಿಯವರ ತಂದೆ ವಿಜೇಂದ್ರ ಸೂರತ್ಕಲ್ ಮೊದಲ ಬಾರಿಗೆ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರವನ್ನು ಹಿರಿಯ ನಟ ನಾಸರ್ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲ. ಚಿತ್ರದಲ್ಲಿ ಶಿವಾಜಿಯ ಮಗಳಾದ ಸಿರಿ ಸೂರತ್ಕಲ್ ಕೂಡ ಬರುತ್ತಾರೆ. ಶಿವಾಜಿ ಅವಳನ್ನು ಮುದ್ದಿನಿಂದ ಚುಕ್ಕಿ ಎನ್ನುತ್ತಾರೆ. ಆ ಮುದ್ದು ಮಗಳು ಶಿವಾಜಿಗೆ ಸಿಕ್ಕಿದ್ದೆಲ್ಲಿ? ಈ ಪ್ರಶ್ನೆಗೆ ಉತ್ತರ ಬೇಕಾದಲ್ಲಿ, ನೀವು ಸಿನಿಮಾ ನೋಡಲೇ ಬೇಕು” ಅಂತಾರೆ ನಿರ್ದೇಶಕರು. ಇದನ್ನೂ ಓದಿ : ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು
ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ 21 ದಿನಗಳ ಚಿತ್ರೀಕರಣ ಮುಗಿಸಿ ತಂಡ ಬೆಂಗಳೂರಿಗೆ ಮರಳಿದೆ. ಇನ್ನು ಬೆಂಗಳೂರಿನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ಸಿನಿಮಾದ ಮೊದಲ ಭಾಗದಲ್ಲಿ ನಟಿಸಿದ್ದ ರಮೇಶ್ ಅರವಿಂದ್ ಶಿವಾಜಿ, ರಾಘು ರಮಣಕೊಪ್ಪ ಹಾಗೂ ರಾಧಿಕಾ ನಾರಾಯಣ್ ಎರಡನೇ ಭಾಗದಲ್ಲೂ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್
ಹೊಸ ತಾರಾಗಣದಲ್ಲಿ ಮೇಘನಾ ಗಾಂವ್ಕರ್ ಡಿಸಿಪಿ ದೀಪಾ ಕಾಮತ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಟರಾದ ಶೋಭರಾಜ್, ಶ್ರೀನಿವಾಸ ಪ್ರಭು ತಾರಾಗಣವನ್ನು ಸೇರಿದ್ದಾರೆ. ಚಿತ್ರದ ಸಂಗೀತವನ್ನು ನಕುಲ್ ಅಭಯಂಕರ್ ಸಂಯೋಜಿಸುತ್ತಿದ್ದಾರೆ. ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.