ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ತಂದೆ ಹಾಗೂ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಫ್ಲೈ ಓವರ್ ಮೇಲೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೈಕಿನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವನಪ್ಪಿದ್ದು, ಪತ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ತಾಯಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಶಿವಮೊಗ್ಗ ಮೂಲದ ಕುಟುಂಬ ಎನ್ನಲಾಗಿದ್ದು ಹೆಸರುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ
ಫ್ಲೈ ಓವರ್ ಮೇಲೆ ಅನಗತ್ಯವಾಗಿ ನಿಂತಿದ್ದ ಲಾರಿಯಿಂದಾಗಿ ಅಪಘಾತವಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಪಘಾತಗಳಿಗೆ ತುಮಕೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯ ಅಕ್ಕ ಪಕ್ಕ ಅವೈಜ್ಞಾನಿಕ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನ ಪೊಲೀಸರು ತಪ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.