ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.: ಬೊಮ್ಮಾಯಿ

Public TV
3 Min Read

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್‍ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ 6 ಸಾವಿರ ಕೋಟಿ ವೆಚ್ಚದಲ್ಲಿ ಅಮೃತ್ ನಗರೋತ್ಥಾನ ಯೋಜನೆಯಡಿ ರಸ್ತೆ ಅಭಿವೃದ್ಧಿ, ಗ್ರೇಡ್ ಸಪರೇಟರ್, ಕೆರೆ, ನೀರುಗಾಲುವೆ, ಪಾರ್ಕ್, ತ್ಯಾಜ್ಯ ನಿರ್ವಹಣೆ, ಸ್ಲಂ ಅಭಿವೃದ್ಧಿ, ಬೀದಿ ದೀಪಗಳು, ಕೊಳಚೆ ಪ್ರದೇಶ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.

karnataka state budget 2022

2022-23 ನೇ ಸಾಲಿನಲ್ಲಿ 33 ಕಿ.ಮೀ ಮೆಟ್ರೋ ಮಾರ್ಗ ಸೇರಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು 2025 ರೊಳಗೆ ಪೂರ್ಣಗೊಳ್ಳಲಿದೆ. ಮೆಟ್ರೋ ಹಂತ್ರ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ – ಜೆಪಿ ನಗರದವರೆಗೆ 32 ಕಿ.ಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿ.ಮೀ ಮಾರ್ಗ ನಿರ್ಮಾಣ ಮಾಡಲಾಗುವುದು.

2022-23 ಸಾಲಿನಲ್ಲಿ 37 ಕಿ.ಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬ್‍ಅಳದವರೆಗೆ 15 ಸಾವಿರ ವೆಚ್ಚದಲ್ಲಿ 36 ಕಿ.ಮೀ ಹೊಸಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ ಕೈಗೊಳ್ಳಲಾಗಿವುದು. ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್ (ಪಾದಾಚಾರಿ-ರಸ್ತೆಬದಿ ವ್ಯಾಪಾರಿಗಳಸ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಲ್ದಾಣದೊಂದಿಗೆ ಸಂಪರ್ಕಿಸಲು) ನಿರ್ಮಾಣ, ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ (ಸಬ್ ಅರ್ಬನ್ ರೈಲ್ವೇ) ಕೈಗೊಳ್ಳುವುದಾಗಿ ಘೋಷಿಸಿದರು.

karnataka state budget 2022 2

73 ಕಿ.ಮೀ. ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ ಈಗಾಗಲೇ ಅನುಮೋದನೆಯಾಗಿದ್ದು DBFOT ಮಾದರಿಯಲ್ಲಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ. ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಜ್ಕೆ ಬಿಬಿಎಂಪಿ ಬಿಡಿಎ ಜಂಟಿ ಕಾಮಗಾರಿ ನಡೆಸಲಿದೆ. ಬಿಡಿಎ ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದರು.

ಸರ್ ಎಂ ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ 6ನೇ ಹಂತ ಅಂಜನಾಪುರ ಬಡಾವಣೆಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ವೆಚ್ಚದಲ್ಲಿ ಬಿಡಿಎಯಿಂದ ನಿರ್ಮಾಣ, ನಂತರ ಪಾಲಿಕೆಗೆ ಹಸ್ತಾಂತರ. ನಗರದ NGEF  105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ.

karnataka state budget 2022 1

ಆರು ಲಕ್ಷ “ಬಿ” ಖಾತಾಗಳನ್ನು ಎ ಖಾತಾಗೆ ದಾಖಲಿಸಲು ಭೂಕಂದಾಯ ನಿಯಮದಡಿ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪನಗರ ರೈಲ್ವೇ ಯೋಜನೆಯನ್ನು 15,267 ಕೋಟಿ ರೂ ವೆಚ್ಚದಲ್ಕಿ 2026 ರ ವೇಳೆಗೆ ಪೂರ್ಣಗೊಳಿಸಲು ಉದ್ದೇಶ. ನಗರಕ್ಕೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5 ನೇ ಹಂತ ಜಾರಿಯಲ್ಲಿದ್ದು, 2024-25 ರೊಳಗೆ ಪೂರ್ಣಗೊಳಿಸಲಾಗುವುದು. ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ. ಎತ್ತಿನಹೊಳೆಯಿಂದ 1.7 ಟಿ.ಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿಜಿ ಹಳ್ಳಿ ಕಾಮಗಾರಿ 22-23 ರಲ್ಲಿ ಮುಕ್ತಾಯವಾಗಲಿದೆ ಎಂದರು.

ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗ್ತಿದೆ. ನಗರದಲ್ಲಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ. ಮೊತ್ತದಲ್ಲಿ ಯೋಜನೆ ಕೈಗೊಳ್ಳುತ್ತೇವೆ. ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮಥ್ರ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ. 20 ಶಾಲೆಗಳನ್ನು ‘ಬೆಂಗಳೂರು ಪಬ್ಲಿಕ್ ಶಾಲೆ?ಗಳಾಗಿ ಅಭಿವೃದ್ಧಿಪಡಿಸಲು 89 ಕೋಟಿ ಮೀಸಲಿಡಲಾಗಿದೆ. ಮಡಿವಾಳ ಕೆರೆ- ಎಲೆಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಬಿಬಿಎಂಪಿಯಿಂದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸಿಎಂ ಘೋಷಿಸಿದರು.

Share This Article
Leave a Comment

Leave a Reply

Your email address will not be published. Required fields are marked *