ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಹತ್ತು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಸಿನಿಮಾದ ಸ್ಪೆಷಲ್ ಅಂದರೆ ತಾರಾಗಣ. ಮೊದಲ ಸಿನಿಮಾದಲ್ಲಿಯೇ ಭವರಸೆ ಮೂಡಿಸಿದ್ದ ಸಾಕಷ್ಟು ಪ್ರತಿಭೆಗಳು ಈ ಸಿನಿಮಾದಲ್ಲಿ ಒಂದಾಗಿವೆ. ಇದನ್ನೂ ಓದಿ : ಆತ ವಾರದಿಂದ ಮಾನಸಿಕ ಹಿಂಸೆ ಕೊಟ್ಟಿದ್ದಾನೆ : ಫ್ಯಾಶನ್ ಐಕಾನ್ ಪುತ್ರನ ವಿಚಿತ್ರ ಖಯಾಲಿ ಬಿಚ್ಚಿಟ್ಟ ನಟಿ ಸಂಜನಾ
ಜತೆಗೆ ಒಂದಷ್ಟು ಪ್ರೇಮಕಥೆಗಳನ್ನು ವಿಭಿನ್ನ ದೃಷ್ಟಿಯಲ್ಲಿ ಹೇಳುವ ಪ್ರಯತ್ನವಾಗಿದೆಯಂತೆ. ನಮ್ಮ ಬದುಕಿನಲ್ಲಿ ಏನೇ ಆದರೂ, ಅದಕ್ಕೆ ನಾವೇ ಹೊಣೆ. ಆಗಿರುವ ವಿಷಯಗಳನ್ನು ನೀಟಾಗಿ, ಹೊಂದಿಸಿ ಬರೆದುಕೊಂಡು ಜೀವನ ಸಾಗಿಸಬೇಕು ಎನ್ನುವ ಸಂದೇಶವನ್ನು ಈ ಸಿನಿಮಾ ನೀಡಲಿದೆಯಂತೆ. ಇದನ್ನೂ ಓದಿ : ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಪ್ರಸ್ತಾಪ
ಈಗಷ್ಟೇ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆಗಿದ್ದು, ಅಲ್ಲಿರುವ ಕಲಾವಿದರಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್
ಏಳು ಯುವಕ-ಯುವತಿಯರ ಒಂದೊಂದು ಕಥೆಯೇ ‘ಹೊಂದಿಸಿ ಬರೆಯಿರಿ’ ಚಿತ್ರ. ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಗುಳ್ಟು ಖ್ಯಾತಿಯ ನವೀನ್, ರಾಕೇಟ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಐಶಾನಿ ಶೆಟ್ಟಿ, ಇದನ್ನೂ ಓದಿ : ಜನಾರ್ದನ ರೆಡ್ಡಿ ಪುತ್ರನ ಸಿನಿಮಾದಲ್ಲಿ ಇಬ್ಬರು ನಾಯಕಿಯರು?
ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಗೆ ಅಮ್ಮನಾಗಿ ನಟಿಸಿದ್ದ ರಚನಾ ಜೋಯಿಸ್, ವಗ್ಗರಣೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಸಂಯುಕ್ತ ಹೊರನಾಡು, ಇಷ್ಟದೇವತೆ ಧಾರಾವಾಹಿಯ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರಖ್ಯಾತಿಯ ಭಾವನಾ ಹೀಗೆ ಪ್ರತಿಭೆಗಳ ಗಣಿಯೇ ಸಿನಿಮಾದಲ್ಲಿ. ಇದನ್ನೂ ಓದಿ: ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ
ಈಗಾಗಲೇ ಬಹುತೇಕ ಶೂಟಿಂಗ್ ಆಗಿದ್ದು, ಮಾಸ್ತಿ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಸಾಹಿತಿ ಶ್ರೀಧರ್ ಬನವಾಸಿ ಕೂಡ ಸಿನಿಮಾದ ಭಾಗವಾಗಿದ್ದಾರೆ.