ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದಕ್ಕೆಲ್ಲ ಅಲ್ಪಕಾಲದ ಯುದ್ಧವಿರಾಮ ಘೋಷಿಸುವುದು ಒಳ್ಳೆಯದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ
ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷರ ಮನವೊಲಿಸಲು ಮುಂದಾಗಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಭಾರತವು ಗ್ರೀನ್ ಹೈಡ್ರೋಜನ್‍ನ ಜಾಗತಿಕ ಹಬ್ ಆಗಬಹುದು: ಮೋದಿ