ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ನೆರವು ನೀಡಿದ ಬಿಎಸ್‍ವೈ

Public TV
1 Min Read
bsy 3

ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿದರು.

bsy 2

ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸ ಇಂದು ಭೇಟಿ ನೀಡಿದ ಯಡಿಯೂರಪ್ಪನವರು ಭಜರಂಗದಳ ಕಾರ್ಯಕರ್ತ  ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹರ್ಷ ಈ ಭಾಗದಲ್ಲಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುತ್ತಿದ್ದ. ಹಿಂದೂ ನಾಯಕನಾಗಿ ಬೆಳೆಯುತ್ತಿದ್ದ. ಇದನ್ನು ಸಹಿಸದ ದುಷ್ಕರ್ಮಿಗಳು ಅವನನ್ನು ಕೊಲೆ ಮಾಡಿದ್ದಾರೆ. ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಗ್ಗಟ್ಟಿನಿಂದ ಬಾಳಬೇಕು. ಪ್ರಧಾನಿ ನರೇಂದ್ರ ಮೋದಿಯವರ ಆಶಯವು ಕೂಡಾ ಅದೇ ಆಗಿದೆ ಎಂದರು.

modi 3

ಕೇವಲ ಹಣ ಮುಖ್ಯವಲ್ಲ. ಆತನ ಕುಟುಂಬಕ್ಕೆ ಭಗವಂತ ಆ ನೋವನ್ನು ತಡೆಯುವ ಶಕ್ತಿ ನೀಡಲಿ. ನಮ್ಮಿಂದ ಸಾಂತ್ವಾನ ಹೇಳುವುದು ಬಿಟ್ಟರೆ ಬೇರೆ ಇನ್ನೇನು ನಮ್ಮ ಕೈಯಲ್ಲಿ‌ ಇಲ್ಲ. ಆದರೆ ಮುಂದೆ ಇಂತಹ ದುರ್ಘಟನೆ ಆಗದಂತೆ ಎಚ್ಚರ ವಹಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಎಲ್ಲರೂ ಸಹಕಾರ ಕೊಡಬೇಕು ಹೇಳಿದರು.

HARSHA

ಬಳಿಕ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು. ಇದೇ ವೇಳೆ ಯಡಿಯೂರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಎಂಎಲ್ಸಿ ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಸಾಥ್ ನೀಡಿದರು. ಇದನ್ನೂ ಓದಿ: ಅವಧಿಗೂ ಮುನ್ನವೇ ರಾಜ್ಯದಲ್ಲಿ ಚುನಾವಣೆ ಬರುವ ಸಾಧ್ಯತೆ: ಹೆಚ್‍ಡಿಕೆ

bsy 1

ಫೆಬ್ರವರಿ 20 ರಂದು ಕ್ಯಾಂಟೀನ್‍ವೊಂದರ ಬಳಿ ಟೀ ಕುಡಿಯುತ್ತಾ ನಿಂತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷನ ಮೇಲೆ ಯುವಕರ ಗುಂಪೊಂದು ಏಕಾಏಕಿ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದನು. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದನು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ, ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ: ಅಮಿತ್ ಶಾ

Share This Article
Leave a Comment

Leave a Reply

Your email address will not be published. Required fields are marked *