ಹುಬ್ಬಳ್ಳಿ: ಉಕ್ರೇನ್‍ನಿಂದ ಮರಳಿ ತಾಯ್ನಾಡಿಗೆ ಬಂದ ವಿದ್ಯಾರ್ಥಿನಿಯನ್ನು ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬರ ಮಾಡಿಕೊಂಡರು.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರು ಸುರಕ್ಷಿತವಾಗಿ ವಾಪಸ್ಸಾದರು. ಅವರನ್ನು ಸ್ವತಃ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. ಇದನ್ನೂ ಓದಿ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಸ್ಥ ಪಾಣಕ್ಕಾಡ್ ತಂಙಳ್ ನಿಧನ
ಡೆಲ್ಲಿ ಮೂಲಕ ಬೆಂಗಳೂರಿಗೆ ಬಂದಿದ್ದ ಚೈತ್ರ ಇಂದು ಬೆಳಗ್ಗೆ ಸಿಎಂ ಜೊತೆಗೆ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದರು. ಧಾರವಾಡ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಪರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿ, ಶುಭ ಹಾರೈಸಿದರು.
ಬಳಿಕ ಮಾತನಾಡಿದ ಸಿಎಂ ನಮ್ಮ ರಾಜ್ಯದ ಎಲ್ಲಾ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ವಾಪಸ್ಸು ಕರೆ ತರಲಾಗುತ್ತದೆ. ಇಲ್ಲಿಗೆ ಬಂದವರ ಮುಂದಿನ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಜೊತೆಗೆ ಮಾತುಕತೆ ನಡೆಸಲಾಗಿದೆ ಎಂದರು. ಇದನ್ನೂ ಓದಿ: ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?