ಶೇನ್ ವಾರ್ನ್ ಕೋಣೆ, ಟವೆಲ್‍ನಲ್ಲಿ ರಕ್ತದ ಕಣ ಇತ್ತು: ಥಾಯ್ಲೆಂಡ್ ಪೊಲೀಸ್

Public TV
1 Min Read
shane warne

ಬ್ಯಾಂಕಾಕ್: ಥಾಯ್ಲೆಂಡ್‍ನಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಆಸ್ಟ್ರೇಲಿಯಾದ ದಿಗ್ಗಜ ಸ್ಪಿನ್ನರ್ ಶೇನ್ ವಾರ್ನ್ ತಂಗಿದ್ದ ಥಾಯ್ಲೆಂಡ್‍ನ ವಿಲ್ಲಾದ ಕೋಣೆಯಲ್ಲಿ ಮತ್ತು ಟವೆಲ್‍ನಲ್ಲಿ ರಕ್ತದ ಕಣ ಪತ್ತೆಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

TAILAND

ವಾರ್ನ್ ಮಾರ್ಚ್ 3 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಥಾಯ್ಲೆಂಡ್‍ನ ವಿಲ್ಲಾದಲ್ಲಿದ್ದ ವಾರ್ನ್‍ಗೆ ಏಕಾಏಕಿ ಹೃದಯಘಾತವಾಗಿದೆ. ಕೂಡಲೇ ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸಿದರೂ ಕೂಡ ಬದುಕುಳಿದಿರಲಿಲ್ಲ. ಇದನ್ನೂ ಓದಿ: ಒಟ್ಟು 65 ದಿನ ಐಪಿಎಲ್ ಕಲರವ – ಆರ್​ಸಿಬಿಗೆ ಪಂಜಾಬ್ ಮೊದಲ ಎದುರಾಳಿ

SHANE WARNE 2

ಈ ಬಗ್ಗೆ ಸ್ಥಳೀಯ ಮಾಧ್ಯವೊಂದರ ವರದಿ ಪ್ರಕಾರ, ವಾರ್ನ್ ಇದ್ದ ಕೋಣೆಯಲ್ಲಿ ರಕ್ತದ ಕಣಗಳು ಪತ್ತೆಯಾಗಿದ್ದು, ಸಿಪಿಆರ್ ಪರೀಕ್ಷೆ ನಡೆಸುವ ಸಂದರ್ಭ ವಾರ್ನ್ ಕೆಮ್ಮಿದಾಗ ರಕ್ತ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಥಾಯ್ಲೆಂಡ್ ಪೊಲೀಸರು ಈ ಹಿಂದೆ ವಾರ್ನ್ ಮರಣದ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಹೃದಯಾಘಾತದಿಂದ ಮರಣ ಹೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೂ ಇದೀಗ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಜಡೇಜಾ ಆಲ್‍ರೌಂಡರ್ ಆಟಕ್ಕೆ ಮಂಕಾದ ಲಂಕಾ – ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ

ಆಸ್ಟ್ರೇಲಿಯಾದ ತಂಡದಲ್ಲಿ ಗೂಗ್ಲಿ ಎಸೆತದ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ವಾರ್ನ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಹಲವು ತಂಡಗಳಿಗೆ ಕೋಚ್ ಮತ್ತು ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿ ಮೊಟ್ಟ ಮೊದಲ ಐಪಿಎಲ್‍ನಲ್ಲಿ ರಾಜಸ್ಥಾನ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *