ನಾನು ಜನರಿಗಾಗಿ ಇದ್ರೆ, ಪ್ರಚಾರಕ್ಕೆ ಕೆಲವರು ಇರುತ್ತಾರೆ: ಹೆಬ್ಬಾಳ್ಕರ್ ವಿರುದ್ಧ ಲಖನ್ ವ್ಯಂಗ್ಯ

Public TV
1 Min Read
Lakhan Jarkiholi BJP Belgaum Laxmi Hebbalkar

ಬೆಳಗಾವಿ: ಮಂತಾಂತರ ನಿಷೇಧ ಕಾಯ್ದೆ ಪರಿಷತ್‍ನಲ್ಲಿ ಮಂಡನೆಯಾಗಿಲ್ಲ. ಮಂಡನೆಯಾದ ಬಳಿಕ ಯಾರಿಗೆ ಬೆಂಬಲಿಸಬೇಕು ಎಂದು ನಿರ್ಧರಿಸುತ್ತೇನೆ ಎಂದು ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೀಗ ಪಕ್ಷೇತರ ಪರಿಷತ್ ಸದಸ್ಯನಾಗಿದ್ದೇನೆ. ಹಾಗೇ ಇರುತ್ತೇನೆ. ವಿಷಯಾಧಾರಿತವಾಗಿ ನಾನು ಬಿಜೆಪಿಗೆ ಬೆಂಬಲ ಸೂಚಿಸುತ್ತೇನೆ. ಪರಿಷತ್ ನಲ್ಲಿ ಬಿಲ್ ಮಂಡನೆ ಆಗಲಿ, ನಂತರ ಈ ಬಗ್ಗೆ ನೋಡೋಣ. ಈ ಸಂಬಂಧ ನನ್ನನ್ನು ಬಿಜೆಪಿ – ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ನನ್ನ ಗುರುಗಳು ಎಂದರು. ಇದನ್ನೂ ಓದಿ: ಮಕ್ಕಳ ಹೃದಯ ಚಿಕಿತ್ಸೆಗೆ ನೆರವಾದ ಟಾಲಿವುಡ್ ಹೃದಯವಂತ ಪ್ರಿನ್ಸ್ 

Lakhan Jarkiholi BJP Belgaum Laxmi Hebbalkar 1

ಬೆಳಗಾವಿ ನಗರ, ಗ್ರಾಮೀಣ ಕ್ಷೇತ್ರದಲ್ಲಿ ಪ್ರವಾಸದ ವಿಚಾರವಾಗಿ ಮಾತನಾಡಿದ ಅವರು, ನಾನು ಜನರಿಗಾಗಿ, ಅವರ ಸೇವೆಗಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಕೆಲವರು ಪ್ರಚಾರಕ್ಕೆ ಮಾತ್ರ ಕೆಲಸವನ್ನು ಮಾಡುತ್ತಾರೆ ಎಂದು ಪರೋಕ್ಷವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲಖನ್ ವ್ಯಂಗ್ಯವಾಡಿದರು.

SIDDU 1

ಮತಾಂತರ ಕುರಿತು ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಗೆ ಬೆಂಬಲಿಸಬೇಡಿ ಎಂದು ಸಿದ್ದರಾಮಯ್ಯ ಹೇಳಿದರೆ ನೋಡೋಣ. ಕಾಂಗ್ರೆಸ್ಸಿನಲ್ಲಿ ಕೆಲ ಸ್ವಯಂಘೋಷಿತ ನಾಯಕರಿದ್ದಾರೆ. ಅಂಥ ನಾಯಕರಿಂದಲೇ ಕಾಂಗ್ರೆಸ್ ಬೆಂಬಲಿಸಲು ವಿಚಾರ ಮಾಡಬೇಕಿದೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲಖನ್ ಪರೋಕ್ಷ ವಾಗ್ದಾಳಿ ನಡೆಸಿದರು.

ramesh jarkiholi

ಸಚಿವ ಸಂಪುಟ ವಿಸ್ತರಣೆ ವೇಳೆ ರಮೇಶ್ ಜಾರಕಿಹೊಳಿ ಪರಿಗಣನೆ ವಿಚಾರಕ್ಕೆ, ರಮೇಶ್ ಜಾರಕಿಹೊಳಿ ಸಂಪುಟ ಸೇರುತ್ತಾರೋ? ಇಲ್ಲವೋ ನನಗೆ ಗೊತ್ತಿಲ್ಲ. ಬಿಜೆಪಿ ಸರ್ಕಾರ ರಚನೆಯಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಬಹಳಷ್ಟಿದೆ. ರಮೇಶ್ ಜಾರಕಿಹೊಳಿಗೆ ಬಿಜೆಪಿ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡುವ ಭರವಸೆ ಇದೆ ಎಂದರು. ಇದನ್ನೂ ಓದಿ: ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ: ಚೈತ್ರಾ ಕುಂದಾಪುರ

Share This Article
Leave a Comment

Leave a Reply

Your email address will not be published. Required fields are marked *