ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ನಂತರ ಸಾವು

Public TV
1 Min Read
breakthrough pig heart transplant 1

ವಾಷಿಂಗ್ಟನ್‌: ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಎರಡು ತಿಂಗಳ ನಂತರ ಮೃತಪಟ್ಟಿದ್ದಾರೆ ಎಂದು ಚಿಕಿತ್ಸೆ ನೀಡಿದ ಆಸ್ಪತ್ರೆ ತಿಳಿಸಿದೆ.

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್‍ನ 57 ವರ್ಷದ ಡೇವಿಡ್ ಬೆನೆಟ್‍ಗೆ ಜ.7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಯಾದ ಮೂರು ದಿನಗಳ ನಂತರ ರೋಗಿಯು ಚೇತರಿಸಿಕೊಂಡಿದ್ದರು. ಅವರಿಗೆ ಅಳವಡಿಸಲಾದ ಹೃದಯ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಮಾ.8 ರಂದು ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

breakthrough pig heart transplant

ಕೆಲವು ದಿನಗಳ ಹಿಂದೆ ಅವರ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ವೈದ್ಯರು ಹೆಚ್ಚು ನಿಗಾವಹಿಸಿ ಚಿಕಿತ್ಸೆ ಮುಂದುವರಿಸಿದರಾದರೂ, ಅವರು ಚೇತರಿಸಿಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು. ನಂತರ ಅವರು ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಕಸಿ ಮಾಡಲಾದ ಹೃದಯವು ಯಾವುದೇ ತೊಂದರೆಯ ಲಕ್ಷಣಗಳಿಲ್ಲದೆ ಹಲವಾರು ವಾರಗಳವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಯುನಿವರ್ಸಿಟಿ ಆಫ್ ಮೇರಿಲ್ಯಾಂಡ್ ಮೆಡಿಸಿನ್ ತಂಡವು ಮನುಷ್ಯನಿಗೆ ಮೊದಲ ಬಾರಿಗೆ ಹಂದಿಯ ಹೃದಯ ಕಸಿ ಮಾಡಿತ್ತು. ಹೊಸ ಜೀನ್ ಎಡಿಟಿಂಗ್ ಉಪಕರಣಗಳಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಇದನ್ನೂ ಓದಿ: ಗೆಳತಿಗೆ ಪ್ರಪೋಸ್ ಮಾಡಿದ ಉಕ್ರೇನ್ ಯೋಧನ ಮನಕರಗುವ ವೀಡಿಯೋ

breakthrough pig heart transplant 2

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ಬೆನೆಟ್‌ ಆ ಸಂದರ್ಭದಲ್ಲಿ, ಸಾಯುವುದು ಅಥವಾ ಈ ಕಸಿ ಮಾಡಿಸಿಕೊಳ್ಳುವುದು ನನ್ನ ಕೊನೆಯ ಆಯ್ಕೆಯಾಗಿತ್ತು. ಆದರೆ ನಾನು ಬದುಕಲು ಬಯಸುತ್ತೇನೆ. ಬದುಕಲು ನನಗೆ ಇದು ಒಂದೇ ಆಯ್ಕೆಯಾಗಿತ್ತು ಎಂದು ಪ್ರತಿಕ್ರಿಯಿಸಿದ್ದರು.

ಹಂದಿಯ ಕೆಲವು ಅಂಗಗಳಲ್ಲಿ ಮನುಷ್ಯನ ಅಂಗಗಳಿಗೆ ಹೋಲುವ ರಚನೆಗಳಿವೆ. ಅದರಲ್ಲಿಯೂ ಮನುಷ್ಯನ ಹೃದಯ ಮತ್ತು ಹಂದಿ ಹೃದಯ ಒಂದೇ ಗಾತ್ರವನ್ನು ಹೊಂದಿರುತ್ತೆ. ಪ್ರಸ್ತುತ ಹಂದಿಗಳಿಂದ ಮಾನವರಿಗೆ ಮೂತ್ರಪಿಂಡಗಳು, ಯಕೃತ್ತು ಮತ್ತು ಶ್ವಾಸಕೋಶಗಳನ್ನು ಕಸಿ ಮಾಡಲು ಸಂಶೋಧನೆ ನಡೆಸಲಾಗುತ್ತಿದೆ. ಹಿಂದೆಯೂ ಈ ರೀತಿ ಕೆಲವು ಪ್ರಯೋಗಗಳನ್ನು ಮಾಡಲಾಗಿತ್ತು. ಇದನ್ನೂ ಓದಿ: ರಷ್ಯಾ ತೈಲ ನಿಷೇಧ- ಅಮೆರಿಕ ಅಧ್ಯಕ್ಷರ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ

Share This Article
Leave a Comment

Leave a Reply

Your email address will not be published. Required fields are marked *