ಲಕ್ನೋ: ಪಂಜಾಬ್ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಆಪ್ ಮುನ್ನಡೆ ಸಾಧಿಸಿದೆ.
ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರೂ ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ. ಚುನಾವಣೋತ್ತರ ಸಮೀಕ್ಷೆಗಳು ಆಪ್ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ ಎಂದು ಎಂದು ಭವಿಷ್ಯ ನುಡಿದಿವೆ.
ಒಟ್ಟು 117 ಸ್ಥಾನಗಳ ಪೈಕಿ ಬಹುಮತಕ್ಕೆ 59 ಅಗತ್ಯವಿದೆ. 2017ರ ಫಲಿತಾಂಶದಲ್ಲಿ ಕಾಂಗ್ರೆಸ್ 77, ಆಪ್ 20, ಎಸ್ಎಡಿ+ ಬಿಜೆಪಿ 18, ಇತರರು 02 ಸ್ಥಾನವನ್ನು ಗೆದ್ದಿದ್ದರು.