ನವದೆಹಲಿ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರಿಗೆ ಪದ್ಮವಿಭೂಷಣ, ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದಾರೆ.
ಯುಪಿ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಯಾವತಿ, ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಗೆಲುವಿಗೆ ಆ ಎರಡು ಪಕ್ಷಗಳ ಕೊಡುಗೆ ಮಹತ್ತರವಾಗಿದೆ. ಪದ್ಮವಿಭೂಷಣ, ಭಾರತರತ್ನ ಪ್ರಶಸ್ತಿಗಳನ್ನು ನೀಡಲಾಗುವುದು. ಮಾಯಾವತಿ ಮತ್ತು ಓವೈಸಿ ಕೊಡುಗೆ ನೀಡಿದ್ದರಿಂದ ಬಿಜೆಪಿ ಗೆಲುವು ಸಾಧಿಸಿದೆ. ಆದ್ದರಿಂದ ಇಬ್ಬರೂ ನಾಯಕರಿಗೆ ಪದ್ಮವಿಭೂಷಣ ಮತ್ತು ಭಾರತ ರತ್ನ ನೀಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ



