Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್

Latest

ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್

Public TV
Last updated: March 13, 2022 9:47 am
Public TV
Share
1 Min Read
bhagwant mann 9
SHARE

ಚಂಡೀಗಢ: ಯಾವುದೇ ಧರ್ಮದ ಬಗ್ಗೆ ಅಗೌರವವನ್ನು ತೋರಿದರೆ ಸಹಿಸುವುದಿಲ್ಲ ಎಂದು ಹೇಳುವ ಮೂಲಕ ಹೋಶಿಯಾರ್‍ಪುರದಲ್ಲಿ ನಡೆದ ಗೋವುಗಳ ಹತ್ಯೆಯನ್ನು ಪಂಜಾಬ್‍ನ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಖಂಡಿಸಿದ್ದಾರೆ.

ಹೋಶಿಯಾರ್‍ಪುರದಿಂದ ಸುಮಾರು 36 ಕಿಮೀ ದೂರದಲ್ಲಿರುವ ಜಾನ್ಸ್ ಹಳ್ಳಿಯ ಸಮೀಪದಲ್ಲಿರುವ ರೈಲ್ವೆ ಹಳಿ ಬಳಿ ಶನಿವಾರ ಬೆಳಗ್ಗೆ ಸುಮಾರು 19 ಹಸುಗಳ ಮೃತದೇಹಗಳು ಪತ್ತೆಯಾಗಿವೆ.

cow

ಈ ಕುರಿತಂತೆ ಪ್ರತಿಕ್ರಿಯಿಸಿದ ಭಗವಂತ್ ಮಾನ್ ಅವರು, ಯಾವುದೇ ಬೆಲೆ ತೆತ್ತಾದರೂ ಪಂಜಾಬ್‍ನಲ್ಲಿ ಶಾಂತಿ ಮತ್ತು ಸಹೋದರತ್ವ ಹದಗೆಡಲು ನಾವು ಬಿಡುವುದಿಲ್ಲ. ಪಂಜಾಬ್‍ನಲ್ಲಿ ಶಾಂತಿ ಕದಡುವ ಸಮಾಜ ವಿರೋಧಿಗಳ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ರಾಜ್ಯದಲ್ಲಿ ಶಾಂತಿ ಮತ್ತು ಭ್ರಾತೃತ್ವವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯ ತನಿಖೆಗಾಗಿ ಪಂಜಾಬ್ ಗೋವು ಸೇವಾ ಆಯೋಗವು ದ್ವಿಸದಸ್ಯ ಸಮಿತಿಯನ್ನು ರಚಿಸಿದ್ದು, ಈ ವಿಚಾರವಾಗಿ ಏಳು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್

Cow copy

ಪೊಲೀಸ್ ವರಿಷ್ಠಾಧಿಕಾರಿ (ತನಿಖೆ) ಮುಖ್ತಿಯಾರ್ ರೈ ಅವರು, ಜಾನ್ಸ್ ಹಳ್ಳಿಯ ಸಮೀಪದಲ್ಲಿ ರೈಲ್ವೇ ಹಳಿ ಬಳಿ ಕೈಬಿಟ್ಟ ಸ್ಥಳದಲ್ಲಿ ತಲೆ ಇಲ್ಲದ ಕನಿಷ್ಠ 19 ಹಸುಗಳ ಶವಗಳು ಪತ್ತೆಯಾಗಿದ್ದು, ಜೊತೆಗೆ ಆಲೂಗಡ್ಡೆ ತುಂಬಿದ ಸುಮಾರು 12 ಗೋಣಿ ಚೀಲಗಳು ಬಿದ್ದಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್

ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹಸುಗಳನ್ನು ಮತ್ತು ಆಲೂಗಡ್ಡೆ ತುಂಬಿದ ಗೋಣಿ ಚೀಲಗಳನ್ನು ಎಸೆದಿದ್ದಾರೆ. ಗೋಹತ್ಯೆ ಮಾಡಿದ ಬಳಿಕ ಅವುಗಳ ಚರ್ಮವನ್ನು ತೆಗೆದುಕೊಂಡು ಹೋಗಿದ್ದಾರೆ. ನಂತರ ಬೆಳಗ್ಗೆ ಸ್ಥಳೀಯರು ಹಸುಗಳು ಸತ್ತಿರುವುದನ್ನು ಕಂಡು ತಾಂಡಾ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

TAGGED:Bhagwant Mancowpolicepunjabಪಂಜಾಬ್ಪೊಲೀಸರುಭಗವಂತ್ ಮಾನ್ಹಸು
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

India vs Pakistan 1
Cricket

T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

Public TV
By Public TV
3 hours ago
Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
4 hours ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
4 hours ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
4 hours ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
5 hours ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?