ನವದೆಹಲಿ: ಉಕ್ರೇನ್‌ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.
ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾ ಭೀಕರವಾಗಿ ದಾಳಿ ನಡೆಸುತ್ತಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ. ಇದನ್ನೂ ಓದಿ: ಉಕ್ರೇನ್‍ನ ಮತ್ತೊಬ್ಬ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ
ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್‌ನ ಭದ್ರತೆ ಕ್ಷೀಣಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್‌ಗೆ ಸ್ಥಳಾಂತರಿಸಲಾಗುವುದು. ಉಕ್ರೇನ್‌ನ ಪರಿಸ್ಥಿತಿ ಸಮತೋಲನಕ್ಕೆ ಬಂದಂತೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – ಜೆರುಸಲೇಮ್‌ನಲ್ಲಿ ಸಂಧಾನಕ್ಕೆ ಬರಲು ಪುಟಿನ್‌ಗೆ ಝೆಲೆನ್ಸ್ಕಿ ಕರೆ
ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನ 1,300 ಸೈನಿಕರು ಸಾವನ್ನಪ್ಪಿದ್ದು, ರಷ್ಯಾ ನಾಗರಿಕ ಮೇಲೂ ದಾಳಿ ಮಾಡುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ. ಇದೀಗ ರಷ್ಯಾ ಉಕ್ರೇನ್‌ನ ಇಬ್ಬರು ಮೇಯರ್‌ಗಳನ್ನು ಅಪಹರಿಸಿರುವುದಾಗಿ ವರದಿಯಾಗಿದೆ.