ಶಾಲೆಲಿ ಎಲ್ರೂ ಪ್ರೀತಿ ವಿಶ್ವಾಸದಿಂದ ಇರಿ, ಬೇರೆಯದಕ್ಕೆ ಅವಕಾಶ ನೀಡ್ಬೇಡಿ: ಸಿದ್ದಗಂಗಾ ಶ್ರೀ

Public TV
1 Min Read
SIDDAGANGA SRI

ತುಮಕೂರು: ಶಾಲೆ ಎಂದ ಮೇಲೆ ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಯಾವುದೇ ಕಾರಣಕ್ಕೂ ಬೇರೆಯದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ಣಪೀಠದ ಆದೇಶ ಬಂದಿದೆ. ಯಾವುದಕ್ಕೂ ಅವಕಾಶ ಮಾಡಿಕೊಡದೇ ಶಾಂತಿಯುತ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು. ಶಿಸ್ತು ನಿಯಮ ಪಾಲನೆ ಮಾಡಿ ಕರ್ನಾಟಕದ ಸಂಸ್ಕೃತಿ ಪರಂಪರೆ ಎತ್ತಿ ಹಿಡಿದು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದರು.

HIJAB HIGH COURT

ಸುದೀರ್ಘ ಚರ್ಚೆ, ವಾದ, ಪ್ರತಿವಾದ ಆಲಿಸಿ ಕೋರ್ಟ್ ತೀರ್ಪು ಕೊಟ್ಟಿದೆ. 15 ದಿನಗಳ ಕಾಲ ಸಮಯಾವಕಾಶದ ನಂತರ ಇವತ್ತು ತೀರ್ಪು ಪ್ರಕಟವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರ ಸಂಹಿತೆ ಕಾನೂನು ಪಾಲನೆ ಮಾಡಬೇಕು ಎಂದು ತೀರ್ಪು ಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಅಶ್ವತ್ಥನಾರಾಯಣ

smg hijab

ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

Share This Article
Leave a Comment

Leave a Reply

Your email address will not be published. Required fields are marked *