ಬಾಲಿವುಡ್ ಪಾಪ ತೊಳೆದ ದಿ ಕಾಶ್ಮೀರ್ ಫೈಲ್ಸ್: ಕಂಗನಾ ರಣಾವತ್

Public TV
1 Min Read
FotoJet 1 45

ಮೊದಲಿನಿಂದಲೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡುತ್ತಾ ಬಂದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್, ಮೊನ್ನೆಯಷ್ಟೇ ಬಾಲಿವುಡ್ ನಟ ನಟಿಯರ ಮೇಲೆ ವಾಗ್ದಾಳಿ ನಡೆಸಿದ್ದರು. ಈ ಸಿನಿಮಾದ ಬಗ್ಗೆ ಬಾಲಿವುಡ್ ಏಕೆ ಮೌನ ತಾಳಿದೆ ಎಂದು ಪ್ರಶ್ನಿಸಿದರು. ಈಗ ಈ ಸಿನಿಮಾದ ಕುರಿತು ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ್ದಾರೆ. ಇಲ್ಲಿಯೂ ಬಾಲಿವುಡ್ ಬಗ್ಗೆಯೇ ಅವರು ಮಾತನಾಡಿದ್ದಾರೆ.

the kashmir files 2

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮತ್ತೆ ಮೆಚ್ಚುಗೆಯ ಮಾತುಗಳನ್ನು ಆಡಿದ ಕಂಗನಾ, ಈ ಸಿನಿಮಾದ ಮೂಲಕ ಬಾಲಿವುಡ್ ಮಾಡಿದ ಪಾಪ ಕಳೆದಂತಾಗಿದೆ. ಇಂತಹ ಸಿನಿಮಾ ಮಾಡಿ ವಿವೇಕ್ ಅಗ್ನಿಹೋತ್ರಿ ಅವರು ಬಾಲಿವುಡ್ ಮಾಡಿದ್ದ ಪಾಪವನ್ನು ತೊಳೆದಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ ಕಂಗನಾ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

the kashmir files 4

ಈ ಸಿನಿಮಾವನ್ನು ಪ್ರತಿಯೊಬ್ಬರು ಬೆಂಬಲಿಸಬೇಕು. ಇಂತಹ ಚಿತ್ರಗಳು ಹೆಚ್ಚೆಚ್ಚು ಬರಬೇಕು. ಹಾಗಾಗಿ ಈ ಸಿನಿಮಾವನ್ನು ನಾನು ನಿರಂತರವಾಗಿ ಬೆಂಬಲಿಸುತ್ತಿದ್ದೇನೆ ಎಂದು ಕಂಗನಾ ಹೇಳಿದ್ದಾರೆ. ಅಲ್ಲದೇ, ಬಾಲಿವುಡ್ ನ ಎಲ್ಲರೂ ಈ ಸಿನಿಮಾವನ್ನು ಬೆಂಬಲಿಸಬೇಕೆಂದು ಅವರು ಹೇಳಿದ್ದಾರೆ.

The Kashmir Files

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ನಾನಾ ರಾಜ್ಯದ ಮುಖ್ಯಮಂತ್ರಿಗಳು ಈ ಸಿನಿಮಾ ಬೆನ್ನಿಗೆ ನಿಂತಿದ್ದಾರೆ. ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದ್ದಾರೆ. ವಿಶೇಷ ಪ್ರದರ್ಶನಗಳನ್ನೂ ಏರ್ಪಡಿಸುತ್ತಿದ್ದಾರೆ. ಅಲ್ಲದೇ, ಅನೇಕ ನಟ ನಟಿಯರು ಕೂಡ ಸ್ವಯಂ ಪ್ರೇರಿತರಾಗಿ ಸಿನಿಮಾ ಬಗ್ಗೆ ಪ್ರಚಾರವನ್ನೂ ಮಾಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *