ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ: ಎಚ್‍.ಡಿ ದೇವೇಗೌಡ

Public TV
2 Min Read
HD Deve Gowda

ನವದೆಹಲಿ: ಪ್ರಾರಂಭದಲ್ಲಿ ಒಂದು ಸಣ್ಣ ಕಿಡಿ ಕರಾವಳಿಯಲ್ಲಿ ಶುರುವಾಯಿತು. ಈ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಉಗ್ರವಾಗಿ ಹೋರಾಟ ಮಾಡಿವೆ. ಹಿಜಬ್ ಪ್ರಕರಣ ಸಣ್ಣದಾಗಿದ್ದಾಗಲೇ ಚಿವುಟಿ ಹಾಕಬಹುದಿತ್ತು. ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್‍.ಡಿ ದೇವೇಗೌಡ ಹೇಳಿಕೆ

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ತೀರ್ಪು ಒಪ್ಪ ಬೇಕೆಂಬುದು ನಮ್ಮ ಪಕ್ಷದ ನಿಲುವು ಇದೇ ಆಗಿತ್ತು. ಈ ವಿಷಯದಲ್ಲಿ ರಾಜಕೀಯ ಲಾಭ-ನಷ್ಟದ ಬಗ್ಗೆ ಇಲ್ಲ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡೆತಡೆ ಇರಬಾರದು. ಮೊದಲಿನಿಂದಲೂ ನನ್ನದು ಇದೇ ನಿಲುವಾಗಿದೆ. ಸುಪ್ರೀಂ ಕೋರ್ಟ್‍ಗೆ ಹೋಗುವವರನ್ನು ಯಾರು ತಡೆಯಲು ಸಾಧ್ಯ? ಹೈಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಿ ಶಾಂತಯುತವಾಗಿರಬೇಕು. ರಾಜ್ಯದಲ್ಲಿ ಶಾಂತಿ ನೆಲಸಲು ವಿದ್ಯಾರ್ಥಿಗಳು, ಪೋಷಕರಿಗೆ ಮನವಿ ಮಾಡುತ್ತೇನೆ. ಸುಪ್ರೋ ಕೋರ್ಟಿನಲ್ಲಿ ಅರ್ಜಿ ಹಾಕುವವರು, ಪೋಷಕರು ಹೈಕೋರ್ಟ್ ತೀರ್ಪನ್ನು ಒಪ್ಪಿಕೊಂಡು ಮುನ್ನಡೆಯುವುದು ಒಳ್ಳೆಯದು ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಒತ್ತಡದಿಂದ ಬಂದಿರುವ ತೀರ್ಪು: ಉಡುಪಿ ವಿದ್ಯಾರ್ಥಿನಿಯರು

hijab 2

ಪ್ರಾರಂಭದಲ್ಲಿ ಒಂದು ಸಣ್ಣ ಕಿಡಿ ಕರಾವಳಿಯಲ್ಲಿ ಶುರುವಾಯಿತು. ಈ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಉಗ್ರವಾಗಿ ಹೋರಾಟ ಮಾಡಿವೆ. ಸಿಎಂ ಬಸವರಾಜ ಬೊಮ್ಮಾಯಿ ತಕ್ಷಣವೇ ಎಲ್ಲಾ ಪಕ್ಷದವರ ಜೊತೆ ಚರ್ಚಿಸಿ ಹತ್ತಿಕ್ಕಬಹುದಿತ್ತು. ಹಿಜಬ್ ಪ್ರಕರಣ ದೊಡ್ಡದಾಗಲು ಸರ್ಕಾರವೇ ಕಾರಣವಾಗಿದೆ. ರಾಜ್ಯ ಸರ್ಕಾರ ಹಿಜಾಬ್ ಪ್ರಕರಣ ನಿಭಾಯಿಸಲು ವಿಫಲವಾಯಿತು. ಈಗ ಸುಪ್ರೀಂ ಕೋರ್ಟಿಗೆ ಹೋಗುತ್ತಿರುವುದರಿಂದ ಇನ್ನೂ ಕೆಟ್ಟ ವಾತಾವರಣ ನಿರ್ಮಾಣವಾಗುತ್ತದೆ. ಹಿಂದಿನ ಹಲವಾರು ಘಟನೆಗಳಿಂದಲೇ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಎರಡೂ ರಾಜಕೀಯ ಪಕ್ಷಗಳು ಉಪಯೋಗ ಪಡೆಯಲು ಪ್ರಯತ್ನಿಸಿವೆ. ಯಾರು ಈ ಪ್ರಕರಣದ ಹಿಂದೆ ಇದ್ದಾರೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಇರುತ್ತದೆ. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬಹುದಿತ್ತು. ಈ ಪ್ರಕರಣವನ್ನು ಬೆಳೆಯಲು ಬಿಡಬಾರದಿತ್ತು. ಹಿಜಬ್ ಪ್ರಕರಣ ಸಣ್ಣದಾಗಿದ್ದಾಗಲೇ ಚಿವುಟಿಹಾಕಬಹುದಿತ್ತು. ಎಸ್‍ಡಿಪಿಐ, ಪಿಎಫ್‍ಐ ಮಾಡುವುದು ಸುಲಭ ಅಲ್ಲ. ಆರ್‍ಎಸ್‍ಎಸ್ ಹೇಗೋ, ಹಾಗೆಯ ಎಸ್‍ಡಿಪಿಐ, ಪಿಎಫ್‍ಐ ರಾಷ್ಟ್ರ ಮಟ್ಟದಲ್ಲಿ ಇದೆ. ಆದುದರಿಂದ ಎಸ್‍ಡಿಪಿಐ, ಪಿಎಫ್‍ಐ ಬ್ಯಾನ್ ಮಾಡುವುದು ಕಷ್ಟ ಎಂಬುದು ನನ್ನ ಭಾವನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *