ಅತ್ಯಂತ ಸವಾಲಿನ ಕಾರ್ಯಾಚರಣೆಯಲ್ಲೂ 22,500 ಭಾರತೀಯರು ತಾಯ್ನಾಡಿಗೆ: ಜೈಶಂಕರ್

Public TV
1 Min Read

ನವದೆಹಲಿ: ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರುವ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿದ್ದರೂ 22,500 ಭಾರತೀಯರನ್ನು ಸ್ಥಳಾತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದರು.

ಉಕ್ರೇನ್ ರಷ್ಯಾದ ಮೇಲೆ ದಾಳಿ ಮಾಡುವುದಕ್ಕೂ ಮೊದಲು ಅಲ್ಲಿದ್ದ ಭಾರತೀಯರನ್ನು ರಕ್ಷಿಸಲು ಭಾರತ ತೆಗೆದುಕೊಂಡ ಕ್ರಮಗಳನ್ನು ಜೈಶಂಕರ್ ಸಂಸತ್ತಿನಲ್ಲಿ ವಿವರಿಸಿದರು.

ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರುವ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಜನವರಿ ತಿಂಗಳಿನಿಂದಲೇ ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಅಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗಾಗಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿತು. ಇದರ ಪರಿಣಾಮವಾಗಿ ಉಕ್ರೇನ್‌ನಲ್ಲಿದ್ದ 20 ಸಾವಿರ ಭಾರತೀಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು ಎಂಬ ಮಾಹಿತಿ ನೀಡಿದರು. ಇದನ್ನೂ ಓದಿ: ಮಲಯಾಳಂ ಸುದ್ದಿ ವಾಹಿನಿ ನಿಷೇಧಿಸಿ ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

operation ganga

ಸಲಹೆಯ ಹೊರತಾಗಿಯೂ ಸಾವಿರಾರು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋದಾಯಿಸಿಕೊಳ್ಳಲು ಹಿಂದೇಟು ಹಾಕಿದರು. ಉಕ್ರೇನ್ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡಿರದ ಕಾರಣ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಭೀಕರ ಯುದ್ಧದ ಸಂದರ್ಭದಲ್ಲಿ ಅಲ್ಲಿದ್ದ ಭಾರತೀಯರು ಉಕ್ರೇನ್‌ನಾದ್ಯಂತ ಚದುರಿ ಹೋಗಿದ್ದರು. ಅವರನ್ನು ಒಟ್ಟಾಗಿಸಿ, ಉಕ್ರೇನ್ ಗಡಿ ದಾಟಿಸಿ ದೇಶಕ್ಕೆ ಕರೆತರುವುದು ಅತ್ಯಂತ ಸವಾಲಿನ ಕೆಲಸವೇ ಆಗಿತ್ತು. ಈ ಕಾರ್ಯಕ್ಕಾಗಿ ಆಪರೇಷನ್ ಗಂಗಾ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಯಿತು ಎಂದು ಜೈಶಂಕರ್ ತಿಳಿಸಿದರು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

Russia Ukraine War 1 1

ಶೆಲ್ ದಾಳಿಗೆ ಮೃತಪಟ್ಟ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಎಲ್ಲಾ ಪ್ರಯತ್ನಗಳೂ ನಡೆಯುತ್ತಿವೆ. ಯುದ್ಧದ ಸಂದರ್ಭದಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಹರ್ಜೋತ್ ಸಿಂಗ್‌ನ ಎಲ್ಲಾ ವೈದ್ಯಕೀಯ ಚಿಕಿತ್ಸೆಗೆ ಸರ್ಕಾರ ಖರ್ಚನ್ನು ಭರಿಸಿದೆ ಹಾಗೂ ಅವರನ್ನು ಕೀವ್‌ನಿಂದ ಪೋಲಿಷ್ ಗಡಿಗೆ ತೆರಳಲು ವ್ಯವಸ್ಥೆ ಮಾಡಿ, ವಿಮಾನದಲ್ಲಿ ಭಾರತಕ್ಕೆ ಕರೆ ತರಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *