Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 21ನೇ ಶತಮಾನ ಜ್ಞಾನದ ಯುಗ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಶಾಲೆ ಗುರಿ: ಅಶ್ವಥ್ ನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 21ನೇ ಶತಮಾನ ಜ್ಞಾನದ ಯುಗ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಶಾಲೆ ಗುರಿ: ಅಶ್ವಥ್ ನಾರಾಯಣ

Bengaluru City

21ನೇ ಶತಮಾನ ಜ್ಞಾನದ ಯುಗ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಶಾಲೆ ಗುರಿ: ಅಶ್ವಥ್ ನಾರಾಯಣ

Public TV
Last updated: March 16, 2022 5:21 pm
Public TV
Share
3 Min Read
ASHWATHNARYAN
SHARE

-ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಶಾಲೆ ಆರಂಭ

ರಾಮನಗರ: ಸರ್ಕಾರದ ಪ್ರತೀ ಗ್ರಾಮ ಪಂಚಾಯತ್‍ಗೊಂದು ಮಾದರಿ ಪಬ್ಲಿಕ್ ಶಾಲೆ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಇಂದು ಲೋಕಾರ್ಪಣೆ ಮಾಡಿದರು.

ASHWATHNARAYAN 1

ಈ ಸಂದರ್ಭದಲ್ಲಿ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನದ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಅನಿವಾರ್ಯ ಅಗತ್ಯವಾಗಿದೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಒಟ್ಟುಗೂಡಿಸಿ, ಅತ್ಯುತ್ತಮ ರೀತಿಯಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಂದು ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು ಎಂದರು. ಇದನ್ನೂ ಓದಿ: 2.5 ಕೆಜಿ ಚಿನ್ನ, 12 ಕೆಜಿ ಬೆಳ್ಳಿ – ಆಸ್ತಿ ಕಂಡು ಎಸಿಬಿ ಅಧಿಕಾರಿಗಳು ಶಾಕ್

ಮಾದರಿ ಪಬ್ಲಿಕ್ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವ ರೀತಿಯಲ್ಲೂ ಕಡಿಮೆ ಇಲ್ಲದಂತೆ ನೋಡಿಕೊಳ್ಳಲಾಗುವುದು. ಸಂಕೀಘಟ್ಟದ ಶಾಲೆಗೆ ಆಟದ ಮೈದಾನ, ಸ್ಮಾರ್ಟ್ ತರಗತಿಗಳು, ಶೌಚಾಲಯ, ಬೋಧಕ ಸಿಬ್ಬಂದಿ ಎಲ್ಲವನ್ನೂ ಒದಗಿಸಲಾಗುವುದು. ಜೊತೆಗೆ, ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಮತ್ತು ಪುನಃ ಮನೆಗೆ ತಲುಪಿಸಲು ವಾಹನ ವ್ಯವಸ್ಥೆಯನ್ನೂ ಮಾಡಲಾಗುವುದು. 2022-23ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯು ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.

ASHWATHNARYAN 1

ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಅಗತ್ಯವಾಗಿರುವ ಮತ್ತಷ್ಟು ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಜೊತೆಗೆ, ಕೆಲವರು ಈ ಶಾಲೆಗೋಸ್ಕರ ಭೂಮಿಯನ್ನು ದಾನವಾಗಿ ಮಾಡಲು ಮುಂದೆ ಬಂದಿದ್ದಾರೆ. ಅದನ್ನೂ ಬಳಸಿಕೊಂಡು, ಈ ಶಾಲೆಯನ್ನು ಪರಿಪೂರ್ಣವಾಗಿ ಬೆಳೆಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಪ್ಪನಂತೆ ಮಗನೂ ಸಮಯ, ಘಳಿಗೆ ನೋಡ್ತಾರೆ: ಸೂರಜ್ ರೇವಣ್ಣ ಕಾಲೆಳೆದ ಅಶೋಕ್

ಸಂಕೀಘಟ್ಟದ ಶಾಲೆಯಲ್ಲಿ ಅಗತ್ಯವಾದ ಹೆಚ್ಚುವರಿ ಕೊಠಡಿಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ತರಗತಿಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳ ಸೌಲಭ್ಯಗಳನ್ನೂ ಕೊಡಲಾಗುವುದು. ಇಲ್ಲಿ 1ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡೂ ಇರಲಿವೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ತಾಲೂಕುಗಳಲ್ಲೂ ಇಂತಹ ತಲಾ ಒಂದೊಂದು ಶಾಲೆಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ASHWATHNARYAN 2

ಹೆಚ್ಚಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿಯವರೆಗೆ ಕೇವಲ 30 ಮಕ್ಕಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದು, ಅವು ಮುಚ್ಚುವ ಸ್ಥಿತಿಗೆ ಬಂದಿವೆ. ಜೊತೆಗೆ ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇರುವ ಒಬ್ಬಿಬ್ಬರು ಶಿಕ್ಷಕರೇ ಎಲ್ಲ ವಿಷಯಗಳನ್ನೂ ಬೋಧಿಸುತ್ತಿದ್ದಾರೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸ್ಥಳೀಯ ಶಾಲೆಗಳನ್ನು ಒಟ್ಟುಗೂಡಿಸಿ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಒಂದು ಪಬ್ಲಿಕ್ ಮಾದರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ದೈವ ಸಂಕಲ್ಪ ಯೋಜನೆ ಬಿ,ಸಿ ವರ್ಗಗಳ ದೇವಾಲಯಗಳಿಗೂ ವಿಸ್ತರಣೆ: ಆರ್.ಅಶೋಕ್

ಗ್ರಾಮೀಣ ವಿದ್ಯಾರ್ಥಿಗಳು ಕೂಡ ಇಂದು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಅವರಿಗೂ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕಾಗಿ ಈಗಾಗಲೇ ಹಲವು ಉಪಕ್ರಮಗಳನ್ನು ರೂಪಿಸಿ, ಜಾರಿಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ASHWATHNARAYAN

ಸಚಿವರು ನಂತರ ಶಟಲ್ ಕಾಕ್ ಆಡುವುದರ ಮೂಲಕ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ವಾಹನಕ್ಕೆ ದೇಣಿಗೆ:
ಸಂಕೀಘಟ್ಟ ಮತ್ತು ತಿಪ್ಪಸಂದ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಮಾಡಲಿ ಎನ್ನುವ ಕಾರಣಕ್ಕೆ ಸಚಿವರು ತಮ್ಮ ಫೌಂಡೇಶನ್ ವತಿಯಿಂದ ತಲಾ ಒಂದು ಲಕ್ಷ ದೇಣಿಗೆಯ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಈ ಎರಡೂ ಪಂಚಾಯತ್‍ಗಳ ಸದಸ್ಯರು ಕೂಡ ತಲಾ ಮೂರು ಲಕ್ಷ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್ ಕೂಡ ತಲಾ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.

ASHWATHNARYANA

ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಡಿಡಿಪಿಐ ಗಂಗಣ್ಣ, ಬ್ಲಾಕ್ ಶಿಕ್ಷಣಾಧಿಕಾರಿ ಯತೀಶ್, ತಹಸೀಲ್ದಾರ್ ಶ್ರೀನಿವಾಸ್, ಸಂಕೀಗಟ್ಟ ಗ್ರಾಪಂ ಅಧ್ಯಕ್ಷ ಸೂರ್ಯಕುಮಾರ್, ತಿಪ್ಪಸಂದ್ರ ಗ್ರಾಪಂ ಅಧ್ಯಕ್ಷೆ ಗಂಗಮ್ಮ ಮುಂತಾದವರು ಉಪಸ್ಥಿತರಿದ್ದರು.

TAGGED:Ashwath Narayaneducationgovernment schoolramanagaraಅಶ್ವಥ್ ನಾರಾಯಣಶಿಕ್ಷಣಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
3 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
3 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
3 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
4 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
5 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?