ಜೈಪುರ: ನೆದರ್ ಲ್ಯಾಂಡ್ ಮಹಿಳೆ ಮೇಲೆ ಮಸಾಜ್ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ನಗರದ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ನೆದರ್ ಲ್ಯಾಂಡ್ ನಿವಾಸಿಯಾಗಿದ್ದು, ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಯುರ್ವೇದ ಮಸಾಜ್ ಮಾಡುವ ನೆಪದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ
ಈ ಘಟನೆ ಸಂಬಂಧ ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕೇರಳ ನಿವಾಸಿವಾಗಿದ್ದು, ಅವರು ಜೈಪುರದ ಖತಿಪುರದಲ್ಲಿ ಮಸಾಜ್ ಮಾಡುವ ಕೆಲಸ ಮಾಡುತ್ತಿದ್ದನು. ಆದರೆ ಘಟನೆ ನಂತರ ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದು, ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಿಚಾ ತೋಮರ್ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಯಾಗುವಂತೆ ಕೇಳಿದ್ದೇ ತಪ್ಪಾಯ್ತಾ? – ಯುವತಿ ಮೇಲೆ ಪೆಟ್ರೋಲ್ ಸುರಿದು ಹತ್ಯೆ