ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು: ಹೆಚ್‍ಡಿಕೆ

Public TV
1 Min Read
H D K RAMNAGARA

ರಾಮನಗರ: ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಒತ್ತಾಯಿಸಿದರು.

H D K RAMNAGARA

ಬಸ್ ಅವಘಡ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯದಲ್ಲಿ ಮೂರು ಕಡೆ ಅವಘಡ ಸಂಭವಿಸಿವೆ. ತುಮಕೂರಿನ ಪಾವಗಡದಲ್ಲಿ ಬಸ್ ಅನಾಹುತವಾಗಿದೆ. ಈ ಆಕ್ಸಿಡೆಂಟ್‍ನಲ್ಲಿ ಎಂಟತ್ತು ಮಂದಿ ಸಾವಿಗೀಡಾಗಿದ್ದಾರೆ. ಬಡಮಂದಿ ಬಸ್ ಅವಘಡದಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ:  ಪಾವಗಡ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ

tmk bus 3

ಹಲವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕವಾಗಿದ್ದಾರೆ. ಸರ್ಕಾರ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಬೇಕು. ಸಾರಿಗೆ ಸಚಿವರು ಹಾಗೂ ಸರ್ಕಾರ ಮಾಹಿತಿ ಪಡೆಯಬೇಕು. ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು. ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು. ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾಗಿರುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಆಗ್ರಹಿಸಿದರು.

bus bidar 1

ಉಡುಪಿ ಹಾಗೂ ಬಳ್ಳಾರಿಯಲ್ಲಿ ಆಕ್ಸಿಜನ್ ಪ್ಲಾಂಟ್ ಅವಘಡವಾಗಿದೆ. ಅಲ್ಲಿ ಸ್ಥಳ ಪರಿಶೀಲನೆ ಮಾಡಿ ಅವಘಡ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಅನಾಹುತದಲ್ಲಿ ನೊಂದವರಿಗೆ ನೆರವು ಸಿಗಬೇಕು. ಜನರ ನೆರವಿಗೆ ಮುಂದಾಗಲಿ ಎಂದು ಸರ್ಕಾರಕ್ಕೆ ಹೇಳಬಯಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

Share This Article
Leave a Comment

Leave a Reply

Your email address will not be published. Required fields are marked *