ಮುಂಬೈ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮುಂಬರುವ ಚುನಾವಣೆಯಲ್ಲಿ ಯಾರಿಗೂ ಯಾವುದೇ ರಾಜಕೀಯ ಲಾಭವನ್ನು ನೀಡುವುದಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಾಜಕೀಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತೆ ಎಂದು ಎಲ್ಲ ಕಡೆಯಿಂದ ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಾವತ್, ಕಾಶ್ಮೀರದಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಕೇವಲ ಚಲನಚಿತ್ರವಾಗಿದೆ. ಮುಂಬರುವ ಚುನಾವಣೆಯಲ್ಲಿ ಇದು ಯಾರಿಗೂ ಯಾವುದೇ ರಾಜಕೀಯ ಲಾಭವನ್ನು ನೀಡುತ್ತದೆ ಎಂದು ನಾನು ಭಾವಿಸುವುದಿಲ್ಲ. ಚುನಾವಣೆ ಬರುವ ವೇಳೆಗೆ ಚಿತ್ರದ ವಿವಾದಗಳು ದೂರವಾಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ
ಚಿತ್ರದಲ್ಲಿ ತೋರಿಸಿರುವ ಘಟನೆಗಳು ನಿಜವೋ ಅಲ್ಲವೋ ಎಂಬುದನ್ನು ನಂತರ ಚರ್ಚಿಸಬಹುದು. ಚಿತ್ರದಲ್ಲಿ ತೋರಿಸಿರುವ ಹಲವು ಸಂಗತಿಗಳು ನಿಜವಲ್ಲ ಎಂದು ಪ್ರಶ್ನಿಸಲಾಗುತ್ತಿದೆ. ತೋರಿಸದಿರುವ ಹಲವು ಸಂಗತಿಗಳು ಇವೆ ಎಂದೂ ಹಲವರು ಹೇಳುತ್ತಿದ್ದಾರೆ. ಆ ಸಮಯದಲ್ಲಿ ಸತ್ತವರಲ್ಲಿ ಮುಸ್ಲಿಮರೂ ಸೇರಿದ್ದಾರೆ. ಮುಸ್ಲಿಮರಿಂದ ಜೀವ ಉಳಿಸಿದ ಅನೇಕ ಅಧಿಕಾರಿಗಳು ಇದ್ದಾರೆ. ಇವೆಲ್ಲವೂ ಸಿನಿಮಾದಲ್ಲಿ ಇಲ್ಲ ಎಂದು ವಿವರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸಿನಿಮಾಗೆ ರಾಷ್ಟ್ರಪ್ರಶಸ್ತಿ ಸಿಗಲಿದ್ದು, ಚಿತ್ರದ ನಿರ್ಮಾಪಕರಿಗೆ ಪದ್ಮಶ್ರೀ, ಪದ್ಮಭೂಷಣ ಇತ್ಯಾದಿ ಸಿಗಲಿದೆ ಎಂದು ತಿಳಿಸಿದರು. 1990 ರ ದಶಕದಲ್ಲಿ ಕಾಶ್ಮೀರದ ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಕೇಂದ್ರೀಕರಿಸುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮಾರ್ಚ್ 11 ರಂದು ಬಿಡುಗಡೆಯಾಗಿದೆ. ಇದನ್ನೂ ಓದಿ: ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್