ತಮಿಳಿನ ಹೆಸರಾಂತ ನಟ ಅಜಿತ್ ನಟನೆಯ ‘ವಲಿಮೈ’ ಸಿನಿಮಾ ಜೀ 5 ಒಟಿಟಿಯಲ್ಲಿ ಪ್ರಸಾರವಾಗಲಿದೆ. ಇದೇ ಶುಕ್ರವಾರದಿಂದ ಈ ಸಿನಿಮಾವನ್ನು ನೋಡಬಹುದು ಎಂದು ಜೀ 5 ಹೇಳಿಕೊಂಡಿದೆ. ಕಳೆದ ಫೆಬ್ರವರಿ 25ರಂದು ಪಂಚ ಭಾಷೆಯಲ್ಲಿ ಬಿಡುಗಡೆ ಆಗಿದ್ದ ವಲಿಮೈ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿತ್ತು. ಅಜಿತ್ ಅವರ ಆಕ್ಷನ್ ಬೈಕ್ ಸ್ಟಂಟ್ ಕಂಡು ಫ್ಯಾನ್ಸ್ ಥ್ರಿಲ್ಲ್ ಆಗಿದ್ದರು.
ಒಟಿಟಿಯಲ್ಲಿ ವಲಿಮೈ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ಚಿತ್ರತಂಡ ಅದ್ಧೂರಿಯಾಗಿ ಪ್ರಮೋಷನ್ ಮಾಡ್ತಿದೆ. ಬರೋಬ್ಬರಿ ಹತ್ತು ಸಾವಿರ ಚದರ ಅಡಿಯಲ್ಲಿ ವಲಿಮೈ ಸಿನಿಮಾದ ಪೋಸ್ಟರ್ ವೊಂದನ್ನು ಜೀ 5ಬಿಡುಗಡೆ ಮಾಡಿ ಚಿತ್ರರಸಿರಕನ್ನು ಅಟ್ರ್ಯಾಕ್ಟ್ ಮಾಡಿದೆ. ಭಾರತೀಯ ಸಿನಿಮಾ ಇಂಡಸ್ಟ್ರೀಯಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದ ಪೋಸ್ಟರ್ ಅನ್ನು ಯಾರು ಬಿಡುಗಡೆ ಮಾಡಿಲ್ಲ ಎನ್ನುವುದು ವಿಶೇಷ. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್
ಅಜಿತ್ ನಟನೆಯ ವಲಿಮೈ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರ.. ತಮಿಳು, ತೆಲುಗು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಈಗ ಐದು ಭಾಷೆಯಲ್ಲಿ ಪ್ರೀಮಿಯರ್ ಆಗಲಿದೆ. ವಲಿಮೈ’ ಚಿತ್ರದಲ್ಲಿ ಅಜಿತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದು, ಎಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಅಜಿತ್ ಜೊತೆಗೆ ಹುಮಾ ಖುರೇಷಿ, ಕಾರ್ತಿಕೇಯ ಗುಮ್ಮಕೊಂಡ, ಕನ್ನಡದ ನಟ ಅಚ್ಯುತ್ ಕುಮಾರ್ ಮುಂತಾದವರು ಬಣ್ಣ ಹಚ್ಚಿದ್ದಾರೆ.