ಚಂಡೀಗಢ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ದಾಳಿ ನಡೆಸಿದೆ.
ಬುಧವಾರ ಮುಂಜಾನೆ ಐಟಿ ಇಲಾಖೆ ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದೆ. ಐಟಿ ಅಧಿಕಾರಿಗಳು ಕಂಪನಿಗೆ ಸಂಬಂಧಿಸಿದ ದಾಖಲೆಗಳ ಹುಡುಕಾಟ ನಡೆಸುತ್ತಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಪುಷ್ಪಾ’ ಸಿನಿಮಾ ಸ್ಟೈಲ್ನಲ್ಲಿ ಸಾಗಣೆ – 2,200 ಕೆ.ಜಿ ರಕ್ತಚಂದನ ಜಪ್ತಿ
ಪವನ್ ಮುಂಜಾಲ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಹೀರೋ ಮೋಟೋಕಾರ್ಪ್ನ ಅಧ್ಯಕ್ಷರಾಗಿದ್ದು ಏಷ್ಯಾ, ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಮಧ್ಯ ಅಮೆರಿಕದ 40 ದೇಶಗಳಲ್ಲಿ ವಹಿವಾಟು ನಡೆಸುತ್ತಿದ್ದಾರೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ ಸಿನಿಮಾ ಶುರು: ಸ್ಫೂರ್ತಿಯಂತೆ ದಿ ಕಾಶ್ಮೀರ್ ಫೈಲ್ಸ್