ಬಿರ್‌ಭುಮ್‌ ಹಿಂಸಾಚಾರ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಮೋದಿ

Public TV
1 Min Read
narendra modi 3

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್‌ ಜಿಲ್ಲೆಯಲ್ಲಿ ನಡೆದ 8 ಜನರನ್ನು ಹತ್ಯೆ ಮಾಡಿದವರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿರ್‌ಭುಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಶಿಕ್ಷೆಯಾಗಲಿದೆ ಎಂದರು.

birbhum

ಈ ರೀತಿಯ ಅಪರಾಧ ಮಾಡುವವರನ್ನು ಮತ್ತು ಅಪರಾಧಿಗಳನ್ನು ಪ್ರೋತ್ಸಾಹಿಸುವವರನ್ನು ಕ್ಷಮಿಸಬಾರದು. ತಪ್ಪಿತಸ್ಥರನ್ನು ನ್ಯಾಯಾಂಗಕ್ಕೆ ತರಲು ಕೇಂದ್ರವು ರಾಜ್ಯಕ್ಕೆ ಎಲ್ಲಾ ರೀತಿಯ ಭರವಸೆಯನ್ನು ನೀಡುತ್ತದೆ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

mamata 3

ಘಟನೆಯೇನು?: ಪಶ್ಚಿಮ ಬಂಗಾಳದ ಬಿರ್‌ಭುಮ್‌ ಜಿಲ್ಲೆಯ ರಾಮ್‍ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಸಜಿವ ದಹನರಾಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ.

crime scene e1602054934159 1

ಈ ಘಟನೆಗೆ ಮುನ್ನ, ಸ್ಥಳೀಯ ಪಂಚಾಯಿತಿ ಮುಖಂಡನ ಹತ್ಯೆಯಾಗಿತ್ತು ಎಂದು ಡಿಜಿಪಿ ಮನೋಜ್ ಮಾಳವೀಯ ಅವರು ಹೇಳಿದ್ದಾರೆ. ಪಂಚಾಯಿತಿ ಮುಖಂಡ ಟಿಎಂಸಿ ಪಕ್ಷದವರು. ಟಿಎಂಸಿಯ ಎರಡು ಗುಂಪುಗಳ ನಡುವಣ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆದರೆ, ಇದನ್ನು ಪೊಲೀಸರು ದೃಢಪಡಿಸಿಲ್ಲ. ಇದನ್ನೂ ಓದಿ: ಬೈಕ್‍ಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ನಾಲ್ವರು ಸಾವು

Share This Article
Leave a Comment

Leave a Reply

Your email address will not be published. Required fields are marked *