ನವದೆಹಲಿ: ಆರ್ಯ ಈಡಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವಂತೆ ಸಮಾಜದ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಡಾ.ಪ್ರಣವಾನಂದ ಸ್ವಾಮೀಜಿಯಿಂದ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಿ ಮುಖ್ಯಮಂತ್ರಿಗಳಿಗೆ ಈ ಕುರಿತು ಸೂಚಿಸುವಂತೆ ಮನವಿ ಮಾಡಿದ್ದಾರೆ.
ನಿಗಮ ಮಂಡಳಿ ಜೊತೆಗೆ ಈಡಿಗ ಸಮುದಾಯಕ್ಕೆ ಶೆಂದಿ ಇಳಿಸುವ ಕುಲ ಕಸುಬಿಗೆ ಮರು ಅನುಮತಿ ನೀಡಬೇಕು. ಸರ್ಕಾರದಲ್ಲಿ ಉತ್ತರ ಕರ್ನಾಟಕದ ಈಡಿಗ ನಾಯಕರಿಗೂ ಸಮಾನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಗೂ ಭೇಟಿಗೂ ಅವಕಾಶ ಕೇಳಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗದ ವಿದ್ಯಾರ್ಥಿಗೆ ಎಂಟೆಕ್ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಚಿನ್ನದ ಪದಕ
ಅರುಣ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಅವರು, ಸಮಾಜಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಖರ್ಗೆ ಅವರನ್ನು ಸೋಲಿಸಲು ಮಾಲಿಕಯ್ಯ ಗುತ್ತೇದಾರ ಅವರನ್ನು ಬಳಸಿಕೊಂಡು ಬಿಜೆಪಿ ಬಿಟ್ಟಿದೆ. ಸಮುದಾಯಕ್ಕೆ ಸೂಕ್ತ ನ್ಯಾಯ ಒದಗಿಸದಿದ್ದರೇ ಮುಂಬರುವ ಜಿಲ್ಲಾ ತಾಲೂಕು ಪಂಚಾಯತ್ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಪಾಠ ಕಲಿಸುವುದಾಗಿ ಹೇಳಿದರು.