ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣ: ಗಡ್ಕರಿ

Public TV
1 Min Read
Nitin Gadkari

ನವದೆಹಲಿ: ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು – ನಿಡಘಟ್ಟ – ಮೈಸೂರು 117 ಕಿಮೀ ಉದ್ದದ ರಸ್ತೆಯನ್ನು 8,350 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ರಸ್ತೆ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದ್ದು, ಅಕ್ಟೋಬರ್ 2022ರೊಳಗೆ ಪೂರ್ಣಗೊಳ್ಳಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ: ನಿತಿನ್‌ ಗಡ್ಕರಿ

Bengaluru Mysuru section of NH

ಈ ರಸ್ತೆಯು ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಮಾಡುವ ಸಮಯವನ್ನು 3 ಗಂಟೆಗಳಿಂದ 75 ನಿಮಿಷಗಳಿಗೆ ಗಣನೀಯವಾಗಿ ಕಡಿಮೆ ಮಾಡುತ್ತದೆ. ಈ ರಸ್ತೆ ಎರಡು ಪ್ರಮುಖ ನಗರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಚೋದನೆಯನ್ನು ನೀಡುತ್ತದೆ.

ರಸ್ತೆಯ ವಿಶೇಷತೆ: ಈ ಅತ್ಯಾಧುನಿಕ ಯೋಜನೆಯು 8 ಕಿಮೀ ಉದ್ದದ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಚಿಕ್ಕ ಸೇತುವೆಗಳು, 64 ಅಂಡರ್‍ಪಾಸ್‍ಗಳು, 11 ಮೇಲ್ಸೇತುವೆಗಳು ಮತ್ತು 5 ಬೈಪಾಸ್‍ಗಳಂತಹ ಬಹು ರಚನೆಗಳನ್ನು ಹೊಂದಿದೆ. ಇದು ಸಂಚಾರ ದಟ್ಟಣೆಯನ್ನು ನಿವಾರಿಸುವುದರ ಜೊತೆಗೆ ಮಾಲಿನ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕ್ರಿಯಾತ್ಮಕ ನಾಯಕತ್ವದಲ್ಲಿ ವಿವಿಧ ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಮತ್ತು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *