ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ – ಬಿಎಸ್‍ವೈ ವಿರುದ್ಧ ಎಸಿಬಿಗೆ ದೂರು

Public TV
1 Min Read
BS Yediyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಕೆ.ಸಿ ರಾಜಣ್ಣ ಹಾಗೂ ವಕೀಲರ ತಂಡ ಎಸಿಬಿಗೆ ದೂರು ನೀಡಿದ್ದಾರೆ.

ಅರ್ಹತೆ ಇಲ್ಲದ CESS ಎನ್ನುವ ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿದ್ದು, ತನಿಖೆ ನಡೆಸುವಂತೆ ಎಸಿಬಿಗೆ ದೂರು ನೀಡಲಾಗಿದೆ.

ದೂರಿನಲ್ಲಿ ಏನಿದೆ?: ಹರಳೂರು ಮತ್ತು ಪೂಲನಹಳ್ಳಿ ಬಳಿ ಇದ್ದ ಕೆಐಎಡಿಬಿಗೆ ಸೇರಿದ ಜಮೀನನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಅರ್ಜಿ ಸಲ್ಲಿದ 30 ದಿನಗಳಲ್ಲಿ 166 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ಚೆಸ್ ಸಂಸ್ಥೆ 130 ಎಕರೆ ಭೂಮಿ ಮಂಜೂರು ಮಾಡಲು ನೇರವಾಗಿ ಅಂದಿನ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿತ್ತು. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ವಿ.ವಿ ಸ್ಥಾಪಿಸಲು ಬಿಎಸ್‍ವೈ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

bsy

ಅಇSS ಸಂಸ್ಥೆ ಜಮೀನು ಮಂಜೂರು ಮಾಡಲು ಪ್ರತಿ ಎಕರೆಗೆ 1.61 ಕೋಟಿ ದರವನ್ನು ಅಪರ ಮುಖ್ಯ ಕಾರ್ಯದರ್ಶಿ ನಿಗದಿ ಪಡಿಸಿದ್ದರು. ಆದರೆ ಬಿಎಸ್‍ವೈ 2021 ಎಪ್ರಿಲ್ 26ರಂದು ಸಚಿವ ಸಂಪುಟದ ಮುಂದೆ ತಂದು 116.16 ಎಕರೆ ಜಾಗವನ್ನು 50 ಕೋಟಿಗೆ ಮಂಜೂರು ಮಾಡಿಕೊಟ್ಟಿದ್ದಾರೆ. ನಿಗದಿ ಪಡಿಸಿದ್ದ 186.76 ಕೋಟಿ ರೂ.ಗೆ ನೀಡದೇ ಕೇವಲ 50 ಕೋಟಿಗೆ ಮಂಜೂರು ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಅಕ್ರಮದ ವಿರುದ್ಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

Share This Article
Leave a Comment

Leave a Reply

Your email address will not be published. Required fields are marked *