ಬಿಜೆಪಿ ಸಂಸ್ಥಾಪನಾ ದಿನದ ಪ್ರಯುಕ್ತ ಸಿಹಿ ಸುದ್ದಿಕೊಟ್ಟ ಪ್ರಧಾನಿ: ಒಂದು ಕ್ಲಿಕ್‌ನಲ್ಲಿದೆ ಮಾಹಿತಿ

Public TV
1 Min Read
MODi

ನವದೆಹಲಿ: ಇದೇ ಏಪ್ರಿಲ್ 6ರಂದು ನಡೆಯಲಿರುವ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಸಾಮರಸ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು – ಹಲವು ಮಹತ್ವದ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

ನವದೆಹಲಿಯ ಅಂಬೇಡ್ಕರ್ ಕೇಂದ್ರದಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿರುವ ಅವರು, ಏಪ್ರಿಲ್ 6 ರಿಂದ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದ ದಿನವಾದ ಏಪ್ರಿಲ್ 14ರ ವರೆಗೆ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಕ್ತದಾನ ಶಿಬಿರಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

NARENDRA MODI

14 ಮಾಜಿ ಪ್ರಧಾನಿಗಳ ಕೊಡುಗೆ ಗುರುತಿಸಲು ಎನ್‌ಡಿಎ ಸರ್ಕಾರ ಕ್ರಮ ಕೈಗೊಂಡಿದೆ. ಅದಕ್ಕಾಗಿ ಪ್ರತಿಷ್ಠಿತ ವಸ್ತು ಸಂಗ್ರಹಾಲಯಗಳನ್ನೂ ನಿರ್ಮಿಸಲಾಗಿದ್ದು, ಏಪ್ರಿಲ್ 14ರಂದು ಸಂಗ್ರಹಾಲಯವನ್ನು ಉದ್ಘಾಟಿಸಾಗುವುದು. ನೆಹರೂ ಮ್ಯೂಸಿಯಂನಲ್ಲಿರುವ ಪ್ರಧಾನ ಮಂತ್ರಿ ಸಂಗ್ರಹಾಲಯವು ಎಲ್ಲ ಮಾಜಿ ಪ್ರಧಾನಿಗಳ ಕಾರ್ಯ ವೈಖರಿ, ಅವರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಲಿದೆ. ಈ ಮೂಲಕ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆ ಗುರುತಿಸುವುದನ್ನು ತಮ್ಮ ಸರ್ಕಾರ ಖಚಿತಪಡಿಸಿದೆ ಎಂದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.  ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು – ಸರ್ಕಾರಕ್ಕೆ ಮಾಹಿತಿ ರವಾನೆ

ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಸ್ಥಾಪಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವಸ್ತು ಸಂಗ್ರಹಾಲಯವೂ ಅಂಬೇಡ್ಕರ್ ಜನ್ಮದಿನವಾದ ಏಪ್ರಿಲ್ 14ರಂದೇ ಲೋಕಾರ್ಪಣೆಗೊಳ್ಳಲಿದೆ ಎಂದಿದ್ದಾರೆ.

Narendra Modi

ಇದೇ ವೇಳೆ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿರುವ ಸಂಸದರು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಯೋಜನೆಯನ್ನು ಇನ್ನೂ 6 ತಿಂಗಳವರೆಗೆ ವಿಸ್ತರಿಸಿದೆ. ಇದರಿಂದ ಎನ್‌ಎಫ್‌ಎಸ್‌ಎ ಅಡಿಯಲ್ಲಿ ಪ್ರತಿ ಫಲಾನುಭವಿಯೂ ಮುಂದಿನ ಸೆಪ್ಟೆಂಬರ್ 22ರ ವರೆಗೆ ಆಹಾರ ಧಾನ್ಯಗಳ ಸಾಮಾನ್ಯ ಕೋಟಾದ ಜೊತೆಗೆ ತಿಂಗಳಿಗೆ ಹೆಚ್ಚುವರಿ 5 ಕೆ.ಜಿ. ಉಚಿತ ಪಡಿತರ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *