ನವದೆಹಲಿ: ಪೆಟ್ರೋಲ್, ಡಿಸೇಲ್ ದರವು ಕಳೆದ 9 ದಿನಗಳಲ್ಲಿ 8ನೇ ಬಾರಿ ಏರಿಕೆಯಾಗಿದ್ದು, ಬುಧವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್‌ಗೆ 5.60ರೂ. ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 105.62 ರೂ. ಇದ್ದ ಪೆಟ್ರೋಲ್ ದರ 106.46 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 89.70 ರೂ. ಇದ್ದ ಡೀಸೆಲ್ ದರ ರೂ. 90.49ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 6 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ..!
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 101.01 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.92.27 ದಾಖಲಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ. ಪೆಟ್ರೋಲ್ ದರ ರೂ. 115.88, ಡೀಸೆಲ್ ರೂ.100.10 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.76 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್‌ಗೆ ಪೆಟ್ರೋಲ್ ಬೆಲೆ 110.52ರೂ ಹಾಗೂ ಡೀಸೆಲ್‍ಗೆ 95.82ರೂ. ದಾಖಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇದನ್ನೂ ಓದಿ: ಸತತ 7ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ