ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

Public TV
3 Min Read
ramlingareddy

ಬೆಂಗಳೂರು: ಬಿಜೆಪಿ ಹಾಗೂ ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ಮಸೀದಿಗಳ ಧ್ವನಿವರ್ಧಕ ನಿಷೇಧ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಒಂದು ಕಡೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದರು. ಇದನ್ನೂ ಓದಿ: ಸಕಾಲ ಯೋಜನೆಯಲ್ಲಿ ಶೀಘ್ರವೇ ತತ್ಕಾಲ್ ಸೇವೆ- ಬಿ.ಸಿ. ನಾಗೇಶ್

mosque loudspeakers

ಇದೆಲ್ಲವನ್ನು ಮರೆಮಾಚಲು ಹಿಜಬ್, ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ನಿಷೇಧ, ಹಲಾಲ್ ಕಟ್ ವಿಚಾರ ತೆಗೆದಿದ್ದು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರವನ್ನು ಎತ್ತಿದ್ದಾರೆ. ಇದು ಇಂದು ನಿನ್ನೆಯ ಉದ್ಭವಿಸಿರುವ ವಿಚಾರವಲ್ಲ. ಬಹಳ ಹಿಂದೆಯೇ ಚರ್ಚೆಗೆ ಬಂದಿದೆ. ಈ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ನಂತರ ಮಾಲಿನ್ಯ ನಿಯಂತ್ರಣ ಮಂಡಳಿಯು ಧ್ವನಿವರ್ಧಕಗಳ ಶಬ್ಧದ ಪ್ರಮಾಣಕ್ಕೆ ಮಿತಿ ಹೇರಿ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

web bjp logo 1538503012658

ಅದರ ಪ್ರಕಾರ ಕೈಗಾರಿಕಾ ಪ್ರದೇಶಗಳಲ್ಲಿ ಮಸೀದಿ ಇದ್ದರೆ ಹಗಲು ವೇಳೆ 75 ಡಿಸೆಬಲ್ ವರೆಗೂ ರಾತ್ರಿ ವೇಳೆ 70ರಷ್ಟು ಇಡಬಹುದು. ವಾಣಿಜ್ಯ ಪ್ರದೇಶಗಳಲ್ಲಿ ಹಗಲು ವೇಳೆ 65 ಹಾಗೂ ರಾತ್ರಿ 55ರ ಪ್ರಮಾಣದಲ್ಲಿ ಇಡಬಹುದು. ವಸತಿ ಪ್ರದೇಶಗಳಲ್ಲಿ ಹಗಲು ವೇಳೆ 55 ಹಾಗೂ ರಾತ್ರಿ ವೇಳೆ 45ರಷ್ಟು, ಆಸ್ಪತ್ರೆಗಳಿರುವ ನಿಶ್ಯಬ್ಧ ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ 50 ಹಾಗೂ ರಾತ್ರಿ ವೇಳೆ 40ರಷ್ಟು ಡಿಸೆಬಲ್ ನಷ್ಟು ಧ್ವನಿವರ್ಧಕ ಹಾಕಬಹುದು ಎಂದು ನಮ್ಮ ಸರ್ಕಾರವೇ ಆದೇಶ ಹೊರಡಿಸಿತ್ತು ಎಂದು ಹೇಳಿದರು. ಇದನ್ನೂ ಓದಿ: ಹೊರಟ್ಟಿ ಬಿಜೆಪಿಗೆ ಬಂದರೆ ಸ್ವಾಗತ: ಶಿವರಾಮ್ ಹೆಬ್ಬಾರ್

ಇದು ಕೇವಲ ಮಸೀದಿಗಳಿಗೆ ಮಾತ್ರವಲ್ಲ ಸಭೆ, ಸಮಾರಂಭಗಳಲ್ಲಿ ಯಾರಿಗೂ ತೊಂದರೆ ಆಗಬಾರದು. ಈ ಮಾನದಂಡದ ಅಡಿಯಲ್ಲಿ ಧ್ವನಿವರ್ಧಕ ಹಾಕಲು ಕಾನೂನಿನ ಅಡಿಯಲ್ಲಿ ಅವಕಾಶ ನೀಡಿದ್ದು, ಇದನ್ನು ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಈ ಹಿಂದೆ ಅನೇಕರಿಗೆ ಇಂತಹ ವಿಚಾರವಾಗಿ ನೋಟಿಸ್ ನೀಡಲಾಗಿದೆ. ಈಗ ಬಹುತೇಕ ಕಡೆಗಳಲ್ಲಿ ಮೈಕ್‍ಗಳಿಗೆ ಈ ಪ್ರಮಾಣದಲ್ಲಿ ಶಬ್ಧ ಹೆಚ್ಚಾಗಿ ಬಾರದಂತೆ ಮಾಡಲಾಗಿದೆ ಎಂದರು.

petrol

ಕೆಲವರು ರಾಜಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಾನದಂಡ ವಿಧಿಸಿ ಅನುಮತಿ ನೀಡಿದೆ. ಬಿಜೆಪಿಯವರು ಸಂವಿಧಾನಕ್ಕಿಂತ ದೊಡ್ಡವರಾಗಿದ್ದರೆ ಅವರು ಹೇಳಿದಂತೆ ಕೇಳಬೇಕಾಗುತ್ತದೆ. ಬಿಜೆಪಿಯವರು ಕೇವಲ ಇಲ್ಲಿಗೆ ನಿಲ್ಲಿಸುವುದಿಲ್ಲ. ಇಂತಹ ಇನ್ನು ಅನೇಕ ಭಾವನಾತ್ಮಕ ವಿಚಾರಗಳನ್ನು ಹುಡುಕಿ ಚರ್ಚೆಗೆ ತರುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಇಂತಹ ಪ್ರಯತ್ನಗಳು ಮುಂದುವರಿಯಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷವಾಗಿ ಕಾಂಗ್ರೆಸ್ ಸರಿಯಾಗಿ ಧ್ವನಿ ಎತ್ತುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಾಧ್ಯಮಗಳು ನಾವು ಎತ್ತುವ ಧ್ವನಿಯನ್ನು ಸರಿಯಾಗಿ ಜನರಿಗೆ ತೋರಿಸಿದರೆ ಸಾಕು. ನಾವು, ನಮ್ಮ ನಾಯಕರು ಹೇಳುವುದಕ್ಕೆ ಒತ್ತು ನೀಡಿದರೆ, ನಮ್ಮ ಧ್ವನಿ ಗೊತ್ತಾಗಲಿದೆ. ನಾವು ಸರ್ಕಾರದ ಜನ ವಿರೋಧಿ ಕೆಲಸಗಳನ್ನು ಪ್ರಶ್ನಿಸುತ್ತಿದ್ದು, ಮಾಧ್ಯಮಗಳು ನಮಗೆ ಪ್ರಚಾರ ನೀಡಬೇಕು ಅಷ್ಟೇ. ಉದಾಹರಣೆಗೆ 2ಜಿ ಹಾಗೂ ಕಲ್ಲಿದ್ದಲು ವಿಚಾರದಲ್ಲಿ ಹಗರಣ ನಡೆಯದಿದ್ದರೂ ಹಗರಣ ನಡೆದಿದೆ ಎಂದು ಮಾಧ್ಯಮಗಳು ದೊಡ್ಡ ಪ್ರಮಾಣದ ಪ್ರಚಾರ ಕೊಟ್ಟವು. ಅದರ ಹೋರಾಟದಿಂದ ಕೇಜ್ರಿವಾಲ್ ಮುಖ್ಯಮಂತ್ರಿ ಆದರು, ಕಿರಣ್ ಬೇಡಿ ರಾಜ್ಯಪಾಲರಾಗಿದ್ದಾರೆ. ಅಣ್ಣಾ ಹಜಾರೆ ಅವರು ಪತ್ತೆ ಇಲ್ಲ, ಬಾಬಾ ರಾಮ್ ದೇವ್ ಅವರೆಲ್ಲ ಹೋರಾಟ ಮಾಡಿದ್ದರು ಎಂದರು.

BRIBE

2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ತನಿಖೆ ಮಾಡಿದಾಗ ಯಾರಿಗೂ ಶಿಕ್ಷೆ ಆಗಲಿಲ್ಲ. ಕಾರಣ ಯಾವುದೇ ಹಗರಣ ನಡೆದಿರಲಿಲ್ಲ ಎಂದು ಉತ್ತರಿಸಿದರು. ಏರಿಕೆ ಹೆಚ್ಚಾಗುತ್ತಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *