ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 38 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ ಒಂದರಲ್ಲೇ 36 ಮತ್ತು ದಕ್ಷಿಣಕನ್ನಡದಲ್ಲಿ 2 ಹೊರತು ಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಏಕೈಕ ಮರಣ ಪ್ರಕರಣ ವರದಿಯಾಗಿದೆ.

ರಾಜ್ಯದಲ್ಲಿ ದಾಖಲಾಗಿರುವ ಏಕೈಕ ಮರಣ ಪ್ರಕರಣ ಬೆಂಗಳೂರು ನಗರದಲ್ಲಿ ವರದಿಯಾಗಿದೆ. ಮರಣ ಪ್ರಮಾಣ 0% ನಿಂದ 2.63%ಕ್ಕೆ ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 40,055 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 0.74%ಕ್ಕೆ ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,500ಕ್ಕೆ ಇಳಿಕೆ ಕಂಡಿದೆ. ಕಳೆದ ವಾರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 0.33% ಮತ್ತು ಮರಣ ಪ್ರಮಾಣ 1.30% ರಷ್ಟಿದೆ. ಒಟ್ಟು 52 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ನಾಳೆ ದೆಹಲಿಗೆ ಬೊಮ್ಮಾಯಿ ದೌಡು – ಮೇಕೆದಾಟು ಯೋಜನೆಗೆ ಅನುಮತಿ ಸಿಗುತ್ತಾ?, ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್‍ಸಿಗ್ನಲ್ ಕೊಡುತ್ತಾ?

ಈವರೆಗೆ ರಾಜ್ಯದಲ್ಲಿ ಒಟ್ಟು 39,45,660 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,049 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 79,483 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 5,083 ಸ್ಯಾಂಪಲ್ (ಆರ್ಟಿಪಿಸಿಆರ್ 4,083 + 1,000 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆತ್ಮಸಾಕ್ಷಿ ಇಲ್ಲದ ಬಿಜೆಪಿ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿದೆ: ಎಚ್‍ಡಿಕೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 36 ಮತ್ತು ದಕ್ಷಿಣಕನ್ನಡ 2ಪ್ರಕರಣ ಹೊರತು ಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

