ಉಳ್ಳವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕಾನೂನು ಕ್ರಮ: ಕೆ.ಗೋಪಾಲಯ್ಯ

Public TV
1 Min Read
gopalaiah

ಮೈಸೂರು: ಉಳ್ಳವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಟೆದುಕೊಂಡಿದ್ದಾರೆ. ಅಂಥವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಇದನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು. ಇದನ್ನೂ ಓದಿ:  ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯವಿದೆ: ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ

bpl card

ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು, ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಬಡವರಿಗೋಸ್ಕರ ಇರುವ ಯೊಜನೆಯನ್ನು ಇತರರು ಪಡೆಯಬಾರದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.

K Gopalaiah

ಸ್ವಂತ ಮನೆ ಹೊಂದಿ 2-3 ಮಹಡಿ ಮನೆ ಕಟ್ಟಿಕೊಂಡಿರುವವರಿಗೆ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು, ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರ ದೇಶದಲ್ಲಿ 50 ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್‍ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

Share This Article
Leave a Comment

Leave a Reply

Your email address will not be published. Required fields are marked *