ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಆರ್ಸಿಬಿ ಅಭಿಮಾನಿಯೊಬ್ಬರು ಹಿಡಿದಿದ್ದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.
ಆರ್ಸಿಬಿ ಮತ್ತು ಚೆನ್ನೈ ನಡುವಿನ ಪಂದ್ಯದ ವೇಳೆ ಆರ್ಸಿಬಿ ಅಭಿಮಾನಿ ಹುಡುಗಿಯೊಬ್ಬಳು ಆರ್ಸಿಬಿ ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ ಎಂದು ಬರೆದುಕೊಂಡಿದ್ದ ಪೋಸ್ಟರ್ ಒಂದು ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಕ್ಯಾಮೆರಾಮ್ಯಾನ್ ಗ್ಯಾಲರಿ ಕಡೆ ಫೋಕಸ್ ಮಾಡಿ ಪೋಸ್ಟರ್ ಹಿಡಿದು ನಿಂತಿದ್ದ ಯುವತಿಯನ್ನು ಚಿತ್ರಿಸುತ್ತಿದ್ದಂತೆ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ. ಇದನ್ನೂ ಓದಿ: 74 ಎಸೆತಗಳಲ್ಲಿ 165 ರನ್ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್‌ಗಳ ಜಯ
14 ಆವೃತ್ತಿಗಳಲ್ಲಿ ಕಪ್ ಗೆಲ್ಲಲು ವಿಫಲವಾಗಿರುವ ಆರ್ಸಿಬಿ ತಂಡ ಈ ಬಾರಿಯಾದರು ಕಪ್ ಗೆಲ್ಲಲಿ ಎಂಬ ಬಯಕೆ ಅಭಿಮಾನಿಗಳದ್ದು, ಹಾಗಾಗಿ ಪ್ರತಿ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಾರೆ. ಐಪಿಎಲ್‍ನಲ್ಲಿರುವ 10 ತಂಡಗಳ ಪೈಕಿ ಆರ್ಸಿಬಿ ತಂಡಕ್ಕೆ ಅತಿ ಹೆಚ್ಚು ಅಭಿಮಾನಿಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡಕ್ಕೆ ಚಿಯರ್ ಆಪ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ
Really worried about her parents right now.. #CSKvsRCB pic.twitter.com/fThl53BlTX
— Amit Mishra (@MishiAmit) April 12, 2022
ಇದೀಗ ಈ ಐಪಿಎಲ್ ಪೋಸ್ಟರ್ ಮತ್ತು ಹುಡುಗಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಆಹಾರವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಜಿ ಕ್ರಿಕೆಟರ್ ಅಮಿತ್ ಮಿಶ್ರಾ ಇದೀಗ ಈ ಹುಡುಗಿಯ ಪೋಷಕರಿಗೆ ತಲೆನೋವು ಶುರುವಾಗಿದೆ ಎಂದು ಬರೆದುಕೊಂಡಿದ್ದಾರೆ.