ಚೆನ್ನೈ: ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾದರೆ ಪಕ್ಷಕ್ಕೆ ಹೆಮ್ಮೆಯಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ
ಹಿಂದಿ ಭಾಷೆ ಹೇರಲು ಕಾಂಗ್ರೆಸ್ ಯತ್ನಿಸಿದ್ದಾಗಲೂ ಅದಕ್ಕೆ ವಿರೋಧ ವ್ಯಕ್ತವಾಗಿತ್ತು ಎಂದು ಅಣ್ಣಾಮಲೈ ಹೇಳಿದ್ದಾರೆ.
ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಎಲ್ಲಾ ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿವೆ. ಜನರಿಗೆ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂಸಾಚಾರ ಪೀಡಿತ ಪ್ರದೇಶ ಭೇಟಿಗೆ ಮುಂದಾದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ
ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಅಮಿತ್ ಶಾ ಅವರ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದು ಬಹು ಭಾಷಾ ಸಂಸ್ಕೃತಿಗೆ ತೋರುವ ಅಗೌರವ ಎಂದು ಅನೇಕರು ಟೀಕಿಸಿದ್ದರು.