ಮುಂಬೈ: ನೆರೆಮನೆಯಲ್ಲಿ ವಾಸವಾಗಿದ್ದ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ.
ಏಪ್ರಿಲ್ 3 ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟವಾಡುವ ನೆಪದಲ್ಲಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರು ಪೊಲೀಸರಿಗೆ ನೀಡಿದ್ದಾರೆ. ಇದನ್ನೂ ಓದಿ: ವಿಜಯನಗರ ಕಾರ್ಯಕಾರಿಣಿಯಲ್ಲಿ ಹಿಂದುತ್ವ ಅಜೆಂಡಾ ಜಪ
ಬಾಲಕಿ ತನ್ನ ಖಾಸಗಿ ಅಂಗಗಳಲ್ಲಿ ನೋವಾಗುತ್ತಿರುವ ಬಗ್ಗೆ ತಾಯಿ ಬಳಿ ಹಂಚಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಬಾಲಕನ ವಿರುದ್ಧ ವಿಠ್ಠಲವಾಡಿ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಬಾಲಕನನ್ನು ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ