ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ಹೆದ್ದಾರಿ ಅಭಿವೃದ್ಧಿಗೆ ಭಾರತ್ ಮಾಲಾ 2ರಲ್ಲಿ ಪರಿಗಣನೆ: ಗಡ್ಕರಿ ಭರವಸೆ

Public TV
1 Min Read
narayana gowda nitin gadkari

ನವದೆಹಲಿ: ಶ್ರೀರಂಗಪಟ್ಟಣದಿಂದ ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬುಧವಾರ ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಚಿವ ಡಾ. ನಾರಾಯಣಗೌಡ, ಶ್ರೀರಂಗಪಟ್ಟಣ- ಕೆ.ಆರ್.ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತೀಕರಿಸಲು ಮನವಿ ಮಾಡಿದರು. ಸಚಿವ ಡಾ. ನಾರಾಯಣಗೌಡ ಮನವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಇದನ್ನೂ ಓದಿ: ಮೌಖಿಕವಾಗಿ ಕಾಮಗಾರಿಗೆ ಆದೇಶ ನೀಡಿದರೆ ಅಧಿಕಾರಿಗಳು, ಇಂಜಿನಿಯರ್‌ ಹೊಣೆ: ಬೊಮ್ಮಾಯಿ

narayana gowda nitin gadkari1

ಶ್ರೀರಂಗಪಟ್ಟಣ- ಕೆ.ಆರ್.ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೀಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ʻಪರ್ವʼ ಕಾದಂಬರಿ ಇಂಗ್ಲಿಷ್ ಅನುವಾದಿತ ಪ್ರತಿಯನ್ನು ಸಚಿವ ನಾರಾಯಣಗೌಡ ಉಡುಗೊರೆಯಾಗಿ ನೀಡಿದರು. ಈ ವೇಳೆ ಕುತೂಹಲಭರಿತರಾಗಿ ಕಾದಂಬರಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸಚಿವರು, ಇದನ್ನು ಖಂಡಿತವಾಗಿ ಓದುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಅಮಿತ್‌ ಶಾ ಮನೆ ಕೆಡವಲು ಬುಲ್ಡೋಜರ್‌ ಬಳಸಿ: ರಾಘವ್‌ ಛಡ್ಡಾ

Nitin Gadkari

ಈ ವೇಳೆ ಸಚಿವ ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *