ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

Public TV
2 Min Read
santhosh

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

SANTHOSH PATIL 1

ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

Contractor Santosh Patil Udupi Police Belgaum Gram Panchayat 1

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

Contractor Santosh Patil Udupi Police Belgaum Gram Panchayat 2

ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

Contractor Santosh Patil Udupi Police Belgaum Gram Panchayat

ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.

Share This Article
Leave a Comment

Leave a Reply

Your email address will not be published. Required fields are marked *