ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು

Public TV
0 Min Read
car accident

ರಾಮನಗರ: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಕುಂಭಾಪುರ ಗೇಟ್ ಬಳಿ ನಡೆದಿದೆ.

car accident 1

ಸುಂದ್ರೇಶ್ (49) ಮತ್ತು ಅವರ ಮಗಳು ತನ್ಮಯ್ (9) ಮೃತ ದುರ್ದೈವಿಗಳು. ಕಾರು ಚಲಾಯಿಸುತ್ತಿದ್ದ ತಂದೆ ಹಾಗೂ 9 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹೆಂಡತಿ ಹಾಗೂ ಮತ್ತೊಬ್ಬ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

car accident 2

ಈ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಾಯಗೊಂಡವರನ್ನು ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

POLICE JEEP

ರಾಮನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article
Leave a Comment

Leave a Reply

Your email address will not be published. Required fields are marked *