ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವೀಟ್‌ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

Public TV
1 Min Read
FotoJet 2 29

ಹಿಂದಿ ರಾಷ್ಟ್ರ ಭಾಷೆಯ ವಿಚಾರವಾಗಿ ಕನ್ನಡದ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ಅಜಯ್ ದೇವಗನ್ ನಡುವೆ ಟ್ವೀಟ್ ಸರಣಿ ನಡೆದಿತ್ತು. ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್‌ ಮಾಡುವ ಮೂಲಕ ಪ್ರಶ್ನೆ ಮಾಡಿದ್ದರು. ಇದರಿಂದಾಗಿ ಇಬ್ಬರು ಸ್ಟಾರ್ ಗಳ ನಡುವೆ ಟ್ವಿಟ್ಟರ್‌ ನಲ್ಲೇ ಪ್ರಶ್ನೋತ್ತರ ನಡೆದಿತ್ತು.  ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

FotoJet 51

ಅಜಯ್ ದೇವಗನ್  ಮಾಡಿದ್ದ ಟ್ವೀಟ್‌ಗೆ  ಉತ್ತರ ನೀಡಿರುವ ಸುದೀಪ್, ‘ನಾನು ದೇಶದ ಪ್ರತಿ ಭಾಷೆಯನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಈ ವಿಷಯವನ್ನು ಇಲ್ಲಿಗೆ ಬಿಡುವಂತೆ ಕೇಳಿಕೊಳ್ಳುವೆ. ನಾನು ಆ ಸಾಲುಗಳನ್ನು ಯಾವ ಸನ್ನಿವೇಶದಲ್ಲಿ ಹೇಳಿದ್ದೇನೆ ಎನ್ನುವುದು ಇಲ್ಲಿ ಮುಖ್ಯ. ಮಚ್ ಲವ್. ಶೀಘ್ರದಲ್ಲೇ ನಿಮ್ಮನ್ನು ಕಾಣುವೆ. ಶುಭಾಶಯಗಳು’ ಎಂದು ಒಂದು ಟ್ವೀಟ್ ಮಾಡಿದ್ದರೆ. ಮತ್ತೊಂದು ಟ್ವಿಟ್ ನಲ್ಲಿ ವಿಷಾದದ ಅರ್ಥದಲ್ಲಿಯೂ ಬರೆದಿದ್ದಾರೆ.

FotoJet 1 31

ನಾನು ಯಾವ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೇನೆ ಎನ್ನುವುದನ್ನು ಖುದ್ದಾಗಿ ತಮ್ಮನ್ನು ಭೇಟಿಯಾದ ನಂತರ ವಿವರಿಸುವೆ. ನನ್ನ ಹೇಳಿಕೆ ಸಂಪೂರ್ಣ ವಿಭಿನ್ನವಾದದ್ದು. ಯಾರನ್ನೂ ನೋಯಿಸಲು, ಪ್ರಚೋದಿಸಲು ಮತ್ತು ಚರ್ಚೆ ಮಾಡಲು ಅದನ್ನು ಹೇಳಿದ್ದಂತೂ ಅಲ್ಲ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕಿಚ್ಚ ಸುದೀಪ್. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

FotoJet 4 12

ಈ ಟ್ವೀಟ್‌ಗೆ ಉತ್ತರಿಸಿರುವ ಅಜಯ್ ದೇವಗನ್ , ತಪ್ಪು ತಿಳುವಳಿಕೆಯಿಂದಾಗಿ ಇಷ್ಟೆಲ್ಲ ಆಯಿತು. ಈ ವಿಷಯವನ್ನು ತಿಳಿಗೊಳಿಸಿದ್ದಕ್ಕೆ ಧನ್ಯವಾದಗಳು ಸ್ನೇಹಿತ ಸುದೀಪ್. ನಾವು ಎಲ್ಲ ಭಾಷೆಗಳನ್ನೂ ಗೌರವಿಸುತ್ತೇವೆ. ಮತ್ತು ಪ್ರತಿಯೊಬ್ಬರೂ ನಮ್ಮ ಭಾಷೆಯನ್ನು ಗೌರವಿಸಬೇಕು ಎಂದು ನಿರೀಕ್ಷಿಸುತ್ತೇವೆ. ಬಹುಶಃ ಅನುವಾದದಲ್ಲಿ ಏನೋ ಮಿಸ್ ಆಗಿರಬಹುದು’ ಎಂದು ಅಜಯ್ ದೇವಗನ್ ಟ್ವಿಟ್ ಮಾಡುವ ಮೂಲಕ ಈ ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *