ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

Public TV
1 Min Read
Sudeep dkshi

ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಪ್ರಾರಂಭವಾಗಿತ್ತು. ಮೊದಲು ಅಜಯ್, ಹಿಂದಿ ರಾಷ್ಟ್ರ ಭಾಷೆ. ನೀವು ಒಪ್ಪಿಕೊಳ್ಳದೇ ಇದ್ದರೆ ನಿಮ್ಮ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ ಎಂದು ಕಿಚ್ಚ ಸುದೀಪ್ ಅವರನ್ನು ಟ್ವೀಟ್‍ನಲ್ಲಿ ನೇರವಾಗಿ ಕೇಳಿದ್ದಾರೆ. ಈ ಟ್ವೀಟ್‍ಗೆ ಚಂದನವನದ ನಟ-ನಟಿಯರು ಸೇರಿದಂತೆ ಅನೇಕರು ವಿರೋಧಿಸಿದ್ದು, ಸುದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

FotoJet 51

ಡಿಕೆಶಿ ಇಂದು ಟ್ವೀಟ್‍ನಲ್ಲಿ, ಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ಧ್ವನಿಗೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡ ಮತ್ತು ಆಂಗ್ಲ ಎರಡು ಭಾಷೆಯಲ್ಲಿಯೂ ಟ್ವೀಟ್ ಮಾಡಿರುವ ಡಿಕೆಶಿ, ತಮ್ಮ ಕಾಂಗ್ರೆಸ್ ಪಕ್ಷ ಎಲ್ಲ ಭಾಷೆಯನ್ನು ಒಟ್ಟಿಗೆ ತಂದು, ಏಕತೆ ಸಾಧಿಸಿತ್ತು ಎಂದು ಬರೆದುಕೊಂಡಿದ್ದಾರೆ. ಅಜಯ್ ಅವರ ಟ್ವೀಟ್ ಖಂಡಿಸಿ ರಾಜಕೀಯ ಗಣ್ಯರು ಸೇರಿದಂತೆ ದಕ್ಷಿಣ ಭಾರತದ ಸಿನಿತಾರೆಯರು ಸುದೀಪ್ ಬೆಂಬಲಕ್ಕೆ ನಿಂತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *