Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

Karnataka

ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

Public TV
Last updated: April 29, 2022 11:14 am
Public TV
Share
3 Min Read
Siddaramaiah
SHARE

ಬೆಂಗಳೂರು: ಬಿಜೆಪಿ ನಾಯಕರೇ, ಅಮಿತ್‌ ಶಾ ಅವರ ಗುಲಾಮರಾಗಬೇಡಿ. ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಹಿಂದಿ ಹೇರಿಕೆ ವಿಚಾರವಾಗಿ ಅಮಿತ್‌ ಶಾ ಪರವಾಗಿ ಮಾತನಾಡಿದ ಬಿಜೆಪಿಗರಿಗೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ @BJP4India ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ.
ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.
1/12#HindiImposition

— Siddaramaiah (@siddaramaiah) April 29, 2022

ಹಿಂದಿ ಭಾಷೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ಬೆಂಬಲವಾಗಿ ನಿಂತ ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ ಎಂದು ಹೇಳಿದ್ದಾರೆ.

ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.
2/12#HindiImposition #Kannadiga

— Siddaramaiah (@siddaramaiah) April 29, 2022

ಟ್ವೀಟ್‌ನಲ್ಲೇನಿದೆ?
ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.

ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.
3/12#HindiImposition

— Siddaramaiah (@siddaramaiah) April 29, 2022

ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ”… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.

ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ.
4/12#HindiImposition #Kannadiga

— Siddaramaiah (@siddaramaiah) April 29, 2022

ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.

ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ.
ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.
5/12#HindiImposition #Kannadiga

— Siddaramaiah (@siddaramaiah) April 29, 2022

ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ.

ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
6/12#HindiImposition #Kannadiga

— Siddaramaiah (@siddaramaiah) April 29, 2022

ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರ ಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.

ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ @CTRavi_BJP, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.
7/12#HindiImposition

— Siddaramaiah (@siddaramaiah) April 29, 2022

ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.

ಕೇಂದ್ರ ಗೃಹ ಸಚಿವ @AmitShah ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ @BJP4Karnataka ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ.
8/12#HindiImposition

— Siddaramaiah (@siddaramaiah) April 29, 2022

ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ.
9/12#HindiImposition #Kannadiga

— Siddaramaiah (@siddaramaiah) April 29, 2022

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ.

ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ.
ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.
10/12#HindiImposition

— Siddaramaiah (@siddaramaiah) April 29, 2022

ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.

ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ @BJP4India ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.
11/12#HindiImposition

— Siddaramaiah (@siddaramaiah) April 29, 2022

ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.

ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.
12/12#HindiImposition

— Siddaramaiah (@siddaramaiah) April 29, 2022

ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು 'ಸಾಂಸ್ಕೃತಿಕ ಭಯೋತ್ಪಾದನೆ' ಎನ್ನದೆ ಬೇರೇನು ಹೇಳಲು ಸಾಧ್ಯ?#HindiImposition #HindiIsNotNationalLanguage pic.twitter.com/0DNRpbbviC

— Siddaramaiah (@siddaramaiah) April 29, 2022

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು ‘ಸಾಂಸ್ಕೃತಿಕ ಭಯೋತ್ಪಾದನೆ’ ಎನ್ನದೆ ಬೇರೇನು ಹೇಳಲು ಸಾಧ್ಯ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

TAGGED:bjpHindi impositionsiddaramaiahtweetಟ್ವೀಟ್ಬಿಜೆಪಿಸಿದ್ದರಾಮಯ್ಯಹಿಂದಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
44 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?