ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ

Public TV
2 Min Read
Ashwath Narayana Belgaum NEP 1

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ‘ರಾಷ್ಟೀಯ ಶಿಕ್ಷಣ ನೀತಿ-2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದನ್ನೂ ಓದಿ:  ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ :ಪ್ರೀತಂ ಸವಾಲು

Ashwath Narayana Belgaum NEP

ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವದ ಅನೇಕ ದೇಶಗಳು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಿವೆ ಇದಕ್ಕೆ ಅನುಗುಣವಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ರಾಷ್ಟೀಯ ಶಿಕ್ಷಣ ನೀತಿ ಅವಶ್ಯವಿದ್ದು, ದೇಶದಲ್ಲಿ 34 ವರ್ಷಗಳ ನಂತರ ಈ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿ ಹೆಚ್ಚಿಸುವುದು ಈ ಶೈಕ್ಷಣಿಕ ಪದ್ಧತಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನಂತರ ಸಲೀಸಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುಬಹುದು ಎಂದು ಹೇಳಿದರು.

ಮಾನವ ಸಂಪನ್ಮೂಲ ಶಕ್ತಿ ಸದ್ಬಳಕೆ
ಸ್ವಾಂತಂತ್ರ್ಯ ನಂತರ ನೂತನ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು ಬಹಳ ಸವಾಲಿನ ಕೆಲಸವಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಈ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿ ಸಮಾಜ ಬದಲಾವಣೆಯ ಉತ್ತಮ ಶಿಕ್ಷಣ ನೀತಿ ಇದಾಗಲಿದೆ.

Ashwath Narayana Belgaum NEP 2

ವಿದ್ಯಾರ್ಥಿಗಳು, ಯುವಕರು ಉದ್ಯೋಗ ಅರಸಿ ಹೋಗದೆ ಕೌಶಲ್ಯಾಭಿವೃದ್ಧಿಯಿಂದ ಸ್ವಯಂ ಉದ್ಯೋಗ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು. ದೇಶದಲ್ಲಿನ ಮಾನವ ಸಂಪನ್ಮೂಲನ ಶಕ್ತಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದಲಾವಣೆ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್‍ಇಪಿ ಸಹಾಯ ಆಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ:  ಬೆಂ.ನ.ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು: ಒತ್ತುವರಿಯಾಗಿದ್ದ ರಾಜಕಾಲುವೆ, ಖಾಸಗಿ ಬಡಾವಣೆ ತೆರವು 

ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಿ, ಕಲೆ, ವಾಣಿಜ್ಯ ಹಾಗೂ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಸುಧಾರಿಸಲಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *