ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವತಿಗೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಲುಕ್‍ಔಟ್ ನೊಟೀಸ್ ಜಾರಿ ಮಾಡಿದ್ದಾರೆ.
ಎಲ್ಲಾ ರಾಜ್ಯಗಳಿಗೆ ಹಾಗೂ ಎಲ್ಲಾ ಭಾಷೆಗಳಲ್ಲೂ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಪೊಲೀಸರು, ಏರ್ ಪೋರ್ಟ್, ರೈಲ್ವೇ ನಿಲ್ದಾಣಗಳಿಗೂ ರವಾನೆ ಮಾಡಿದ್ದಾರೆ. ಸದ್ಯ ಆಶ್ರಮ, ಧ್ಯಾನಮಂದಿರಗಳಲ್ಲಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ
ನಾಗೇಶ್ ತಮಿಳುನಾಡಿನಲ್ಲಿ ಅವಿತಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಇದ್ದಾನೆ ಅನ್ನೋ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ತಮಿಳುನಾಡಿನ ದೇಗುಲಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.