ಹಾಸನ: ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ ನಡೆದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಒಂದು ಅಪಘಾತ ನಗರದ ಉದ್ದೂರು ರಿಂಗ್ ರಸ್ತೆಯಲ್ಲಿ ನಡೆದರೆ, ಮತ್ತೊಂದು ಸಾಲಗಾಮೆ ರಸ್ತೆಯಲ್ಲಿ ನಡೆದಿದೆ.
ರಿಂಗ್ ರಸ್ತೆಯಲ್ಲಿ ಹಿಂಬದಿಯಿಂದ ಆ್ಯಕ್ಟಿವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮಣಿಕಂಠ (25) ಸಾವನ್ನಪ್ಪಿದ್ದಾರೆ. ಅವರು ಖಾಸಗಿ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಮದುವೆ ನಿಶ್ಚಯವಾಗಿತ್ತು. ಹೀಗಾಗಿ ತಮ್ಮ ನಿಶ್ಚಿತಾರ್ಥಕ್ಕೆ ಬಟ್ಟೆ ತರಲು ಹಾಸನಕ್ಕೆ ಬರುತ್ತಿದ್ದರು. ಈ ವೇಳೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಟ್ರಿಪ್‌ಗೆ ಹೋಗ್ತಿದ್ದೀನಿ, ಟಿವಿ-ಪೇಪರ್‌ನಲ್ಲಿ ಬರ್ತೀನಿ ಎಂದಿದ್ದ ಆ್ಯಸಿಡ್ ನಾಗ
ಘಟನೆಯಿಂದಾಗಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮತ್ತೊಂದು ಅಪಘಾತದಲ್ಲಿ ನಿಂತಿದ್ದ ಟ್ಯಾಕ್ಟರ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 5 ದಿನವಾದ್ರೂ ಸಿಗದ ಆ್ಯಸಿಡ್ ನಾಗನ ಸುಳಿವು- ಪಾಗಲ್ ಪ್ರೇಮಿಯ ಪ್ರೀಪ್ಲ್ಯಾನ್ ಕೇಳಿ ಪೊಲೀಸ್ರೇ ಶಾಕ್