ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

Public TV
1 Min Read
SRILANKA

ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಳಾಗಿದೆ. ಈ ಮೂಲಕ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

Gotabaya Rajapaksa 1

ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ಮುಂದಿನ 20 ವರ್ಷಗಳಲ್ಲಿ ಬರಲಿದೆ ಇನ್ನೊಂದು ಸಾಂಕ್ರಾಮಿಕ: ಬಿಲ್ ಗೇಟ್ಸ್ ಭವಿಷ್ಯ

srilanka 3 app

ನಿನ್ನೆ ಅಧ್ಯಕ್ಷರ ವಕ್ತಾರರು ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ತಾವು ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು, ಅಗತ್ಯ ಸೇವೆಗಳು ಹಾಗೂ ಶಾಂತಿ ಸುವ್ಯವಸ್ಥೆಗಳ ನಿರ್ವಹಣೆಯ ದೃಷ್ಟಿಯಿಂದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

SRILANKA 2

ಈ ಮೊದಲು ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್‍ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಇದೀಗ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದರಿಂದ ಸೇನೆಗೆ ಶಂಕಿತರನ್ನು ಬಂಧಿಸಿ ದೀರ್ಘಾವಧಿಯವರೆಗೂ ನ್ಯಾಯಾಂಗದ ಮೇಲ್ವಿಚಾರಣೆ ಇಲ್ಲದೇ ಬಂಧನದಲ್ಲಿಡುವುದಕ್ಕೆ ಸಾಧ್ಯವಾಗಲಿದೆ. ಇದನ್ನೂ ಓದಿ: ಶನಿವಾರದಿಂದ್ಲೇ ಆಪರೇಷನ್ ಕಮಲ ಶುರು- ಮಂಡ್ಯದಲ್ಲಿ ಲಕ್ಷ್ಮೀ, ಅಶೋಕ್ ಜಯರಾಂ ಸೇರ್ಪಡೆ

SRILANKA 1

ದ್ವೀಪ ದೇಶ ಕೆಲ ತಿಂಗಳುಗಳಿಂದ ವಿದ್ಯುತ್, ಆಹಾರ, ಇಂಧನ ಹಾಗೂ ಔಷಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. 1946ರಲ್ಲಿ ಶ್ರೀಲಂಕಾಗೆ ಸ್ವಾತಂತ್ರ ಲಭಿಸಿದ ಬಳಿಕ ಇಷ್ಟೊಂದು ಭಯಾನಕವಾದ ಆರ್ಥಿಕ ಬಿಕ್ಕಟ್ಟನ್ನು ಇದೇ ಮೊದಲ ಬಾರಿಗೆ ನೋಡುತ್ತಿದೆ. ಈಗಾಗಲೇ ಇಂಧನ ಕೊರತೆ, ವಿದ್ಯುತ್ ಸಂಪರ್ಕ ಕಡಿತ, ನಿರುದ್ಯೋಗ ಸಮಸ್ಯೆ ಹಾಗೂ ಔಷಧಗಳ ಕೊರತೆ ಜನರನ್ನು ಬಾಧಿಸುತ್ತಿದೆ. ಇದರಿಂದಾಗಿ ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *