Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾರ್ಮಾಡಿ ಘಾಟ್‍ನ ದೇವಿ ಹೇಳಿದ ಜಾಗದಲ್ಲೇ ಸಿಕ್ತು ಮೂಲ ವಿಗ್ರಹ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಾರ್ಮಾಡಿ ಘಾಟ್‍ನ ದೇವಿ ಹೇಳಿದ ಜಾಗದಲ್ಲೇ ಸಿಕ್ತು ಮೂಲ ವಿಗ್ರಹ 

Chikkamagaluru

ಚಾರ್ಮಾಡಿ ಘಾಟ್‍ನ ದೇವಿ ಹೇಳಿದ ಜಾಗದಲ್ಲೇ ಸಿಕ್ತು ಮೂಲ ವಿಗ್ರಹ 

Public TV
Last updated: May 11, 2022 10:33 am
Public TV
Share
3 Min Read
chikmagalur charmadi ghat
SHARE

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ  ಗುಳಿಗ ದೈವನ ಮೂಲ ವಿಗ್ರಹ ಆ ದೇವ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ ಗುಳಿಗ  ದೈವನ ಮೇಲಿದ್ದ ದೈವದ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ.

ಕಳೆದ ಏಪ್ರಿಲ್ 24ರಂದು ಗುಳಿಗ  ದೈವದ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ದೈವದ ದರ್ಶನದಲ್ಲಿ ಕ್ಷೇತ್ರದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ಗುಳಿಗ  ದೈವದ ಮೂಲ ವಿಗ್ರಹ ಇದೆ. ಹುಡುಕಿದರೆ ವಿಗ್ರಹ ಸಿಗಲಿದೆ ಎಂದು ದೈವದ ದರ್ಶನದಲ್ಲಿ ದೇವಿಯೇ ಹೇಳಿದ್ದಳು. ಹಾಗಾಗಿ, ಗುಳಿಗ  ದೈವದ ಕ್ಷೇತ್ರ ಅಭಿವೃದ್ಧಿಯ ಪದಾಧಿಕಾರಿಗಳು ಗುಳಿಗ  ದೈವದ ದೇವಸ್ಥಾನದಿಂದ ಮೂರು-ನಾಲ್ಕು ಕಿ.ಮೀ. ದೂರದಲ್ಲಿ ಹುಡುಕಾಟ ನಡೆಸಿದ್ದಾರೆ. ಆಗ ಆಲೇಖಾನ್ ಎಸ್ಟೇಟ್ ಒಂದರ ಮರದ ಬುಡದಲ್ಲಿ ದೇವಿಯ ಮೂಲವಿಗ್ರಹ ಪತ್ತೆಯಾಗಿದೆ.

chikmagalur charmadi ghat 1

ದೇವಸ್ಥಾನದಿಂದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ನೋಡಿದಾಗ ದೇವಿನ ಕಂಚಿನಮೂರ್ತಿ, ಗಂಟೆ ಹಾಗೂ ಕತ್ತಿ ಪತ್ತೆಯಾಗಿವೆ. ನೂರಾರು ವರ್ಷಗಳ ಹಿಂದೆ ಈ ಜಾಗದಲ್ಲಿ ಚಾಮುಂಡೇಶ್ವರಿ, ಗುಳಿಗಮ್ಮ, ಬಬ್ಬುಸ್ವಾಮಿಗೆ ವಿಜೃಂಭಣೆಯಿಂದ ಪೂಜಾ, ವಿಧಿ-ವಿಧಾನಗಳು ನಡೆಯುತ್ತಿದ್ದವು. ಈಗ ಗುಳಿಗಮ್ಮ ದೇವಿ ಹೇಳಿರೋ ಜಾಗದಲ್ಲೇ ಪುರಾತನ ಮೂರ್ತಿಗಳು ಸಿಕ್ಕಿರೋದು ಕ್ಷೇತ್ರ ಹಾಗೂ ದೇವಿಯ ಮಹಿಮೆಯನ್ನ ಇಮ್ಮಡಿಗೊಳಿಸಿದೆ.

ದೇವಿ ಹೇಳಿದ ಜಾಗದಲ್ಲೇ ಮೂಲ ವಿಗ್ರಹ ಪತ್ತೆಯಾದ ಹಿನ್ನೆಲೆ ಭಕ್ತರು ದೇವಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಈಗ ಸಿಕ್ಕಿರೋ ಪುರಾತನ ಮೂರ್ತಿಗಳನ್ನ ಅದೇ ಜಾಗದಲ್ಲಿ ಪುನರ್ ಪ್ರತಿಷ್ಠಾಪಿಸಿ ದೇವಿಯ ಹಿಂದಿನ ಗತಕಾಲದ ವೈಭವನ್ನು ಮತ್ತೆ ಮರುಕಳಿಸಲು ಯೋಚಿಸಿದ್ದಾರೆ. ಆದರೆ, ಈಗ ಗುಳಿಗ ದೈವ ಹೇಳಿರೋ ಜಾಗದಲ್ಲೇ ಮೂಲ ವಿಗ್ರಹ ಸಿಕ್ಕಿರೋದು ಮುಂದಿನ ದಿನಗಳಲ್ಲಿ ದೈವ ದರ್ಶನದ ಹೇಳಿಕೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹೇಳಿದ್ದಾರೆ.

chikmagalur charmadi ghat 2

ಗುಳಿಗ  ದೈವ ಮಹಿಮೆ : ಈ ಗುಳಿಗಮ್ಮ ದೇವಿ ಅಂದ್ರೆ ಯಾರಿಗೂ ಅಷ್ಟಾಗಿ ಗೊತ್ತಿಲ್ಲ. ಆದರೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಚಾರ್ಮಾಡಿ ಘಾಟ್‍ನ ಮಾರ್ಗದಲ್ಲಿ ನೆಲೆ ನಿಂತಿರುವವಳೇ ಗುಳಿಗಮ್ಮ ದೇವಿ. ನಿತ್ಯ ಸಾವಿರಾರು ವಾಹನಗಳು ಓಡಾಡುವ ಈ ದಟ್ಟಾರಣ್ಯದ ಹಾವುಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಚಲಿಸಲು ಗಟ್ಟಿ ಗುಂಡಿಗೆ ಬೇಕು.

GuligammaDevi CharmadiGhat

ಈ ಮಾರ್ಗ ಎಷ್ಟು ಸೌಂದರ್ಯ-ಅನಿವಾರ್ಯವೋ ಅಷ್ಟೆ ಅಪಾಯ ಕೂಡ. ಆದರೆ, ಈಕೆ ಬಗ್ಗೆ ಗೊತ್ತಿರುವವರು ಈ ಮಾರ್ಗದಲ್ಲಿ ಸಂಚರಿಸುವಾಗ ಈ ದೇವಿಗೆ ಕೈಮುಗಿಯದೆ ಮುಂದೆ ಹೋಗಲ್ಲ. ಚಾರ್ಮಾಡಿ ರಸ್ತೆಯ ಅಲೇಖಾನ್ ಹೊರಟ್ಟಿ ಗ್ರಾಮದ ಆರಂಭದಲ್ಲೇ ಈ ದೈವ ವಿರಾಜಮಾನವಾಗಿ ನೆಲೆ ನಿಂತಿದ್ದಾಳೆ. ಅಂದು ಈಕೆಗೆ ಮೂರ್ತಿ ಇರಲಿಲ್ಲ. ಇಂದು ಈಕೆಯ ಪುರಾತನ ವಿಗ್ರಹ ಸಿಕ್ಕಿದೆ. ಅಂದು ಕಲ್ಲಿನ ಮೂರ್ತಿಗೆ ಕೈಮುಗಿಯುತ್ತಿದ್ದರು. ಇನ್ಮುಂದೆ ಮೂರ್ತಿ ರೂಪದಲ್ಲಿ ನೆಲೆ ನಿಲ್ಲುತ್ತಾಳೆ. ಈಕೆಯದ್ದು ಅಪಾರ ಶಕ್ತಿ ಅನ್ನೋದು ಭಕ್ತರ ನಂಬಿಕೆ. ವರ್ಷ ಪೂರ್ತಿ ಈ ಮಾರ್ಗದಲ್ಲಿ ಸಂಚರಿಸುವವರನ್ನು ಈಕೆಯೇ ಕಾಯುತ್ತಾಳೆ ಅನ್ನೋದು ಸಾವಿರಾರು ಜನರ ನಂಬಿಕೆ.

chikmagalur charmadi ghat 3

ಕಳೆದ ಎರಡ್ಮೂರು ವರ್ಷಗಳಿಂದ ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಒಂದೇ ರಾತ್ರಿಗೆ 22 ಇಂಚಿನಷ್ಟು ಮಳೆ ಸುರಿದು ಮಲೆನಾಡೇ ಅಲ್ಲೋಲ-ಕಲ್ಲೋಲವಾಗಿತ್ತು. ಮಳೆಗಾಲದಲ್ಲಿ ಅತಿಹೆಚ್ಚು ಭೂ ಕುಸಿತ, ಗುಡ್ಡ ಕುಸಿತವಾದರೂ ಕೂಡ ಸಾವಿರಾರು ವಾಹನಗಳಲ್ಲಿ ಸಂಚರಿಸುವ ಯಾರೊಬ್ಬರಿಗೂ ಸಣ್ಣ ಅನಾಹುತ-ಅಪಾಯ ಕೂಡ ಆಗಿಲ್ಲ.

chikmagalur charmadi ghat 5

ಚಾರ್ಮಾಡಿ ಘಾಟಿಯೇ ಅಲ್ಲೋಲ-ಕಲ್ಲೋಲವಾದರೂ ಈ ಪ್ರದೇಶ ಕಿಂಚಿತ್ತು ಅಲುಗಾಡಿರಲಿಲ್ಲ. ದೈವ ನೆಲೆಸಿರೋ ನೂರು ಮೀಟರ್ ಅಂತರದಲ್ಲಿ ರಸ್ತೆಯ ಎರಡು ಭಾಗ ಕುಸಿದಿದ್ದರೂ ಕೂಡ ಈಕೆ ಸ್ಥಳದ ಒಂದು ಹುಲ್ಲು ಕಡ್ಡಿಯೂ ಅಲುಗಾಡಿರಲಿಲ್ಲ. ಒಂದಿಂಚು ಭೂಮಿಯೂ ಕದಲಿರಲಿಲ್ಲ. ಇದನ್ನೂ ಓದಿ: ಧ್ವನಿವರ್ಧಕಗಳ ವಿಚಾರದಲ್ಲಿ ತಾಳ್ಮೆಯನ್ನು ಪರೀಕ್ಷಿಸಬೇಡಿ: ರಾಜ್ ಠಾಕ್ರೆ

chikmagalur charmadi ghat 4

ಚಾರ್ಮಾಡಿ ಘಾಟಿಗೆ ಅಂಟಿಕೊಂಡಂತಿರುವ ಆಲೇಖಾನ್ ಹೊರಟ್ಟಿ ಗ್ರಾಮದ ರಸ್ತೆಯ ಹಲವೆಡೆ ಬೃಹತ್ ಪ್ರಮಾಣದ ಬಂಡೆಗಳು ಬಿದ್ದರೂ ಗ್ರಾಮ, ಗ್ರಾಮದ ಜನರಿಗೆ ಯಾವುದೇ ತೊಂದರೆಯಾಗಿಲ್ಲ. ಹಾಗಾಗಿ, ಚಾರ್ಮಾಡಿ ಘಾಟಿಯನ್ನ ರಕ್ಷಿಸಿ, ಉಳಿಸಿ, ಜನರನ್ನೂ ಕಾಪಾಡ್ತಿರೋದೆ ಈಕೆ ಅನ್ನೋದು ಸ್ಥಳಿಯರು-ಸಾವಿರಾರು ಪ್ರವಾಸಿಗರ ನಂಬಿಕೆ ಆಗಿದೆ. ಇದನ್ನೂ ಓದಿ: ಅಸನಿ ಸೈಕ್ಲೋನ್ ಎಫೆಕ್ಟ್ – 3 ದಿನ ಮಳೆ ಸಂಭವ

TAGGED:charmadi ghatChikmagalurguligamma deviಗುಳಿಗಮ್ಮ ದೇವಿಚಾರ್ಮಾಡಿ ಘಾಟ್ಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
4 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?