ಚಾಮರಾಜನಗರ: ಕೇರಳದಲ್ಲಿ ಟೊಮ್ಯಾಟೋ ಜ್ವರ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಚಾಮರಾಜನಗರ ಡಿಎಚ್‍ಒ ಡಾ.ವಿಶ್ವೇಶ್ವರಯ್ಯ ಅವರು, ನಿತ್ಯ ನೂರಾರು ಪ್ರಯಾಣಿಕರು ಸಂಚರಿಸುವ ಹಿನ್ನಲೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿಭಾಗದ ಬಂಡೀಪುರ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಪ್ರಯಾಣಿಕರ ತಪಾಸಣೆಗೆ ಇಂದಿನಿಂದಲೇ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡುತ್ತೇವೆ. ಟೊಮ್ಯಾಟೊ ಜ್ವರದ ಲಕ್ಷಣ ಇರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆಗೆ ಕ್ರಮವಹಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
ಜಿಲ್ಲೆಯಲ್ಲಿ 5 ವರ್ಷದ ಒಳಗಿನ 67 ಸಾವಿರ ಮಕ್ಕಳಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಜಿಲ್ಲೆಯ ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲಿಸಲು ಸೂಚನೆ ಕೊಡಲಾಗಿದೆ. ಮಕ್ಕಳಿಗೆ ಟೊಮ್ಯಾಟೊ ಜ್ವರದ ಲಕ್ಷಣ ಕಂಡು ಬಂದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಕ್ರಮವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 80ಕ್ಕೂ ಹೆಚ್ಚು ಮಕ್ಕಳನ್ನ ಕಾಡುತ್ತಿದೆ ಟೊಮೆಟೊ ಜ್ವರ – ಏನಿದರ ಲಕ್ಷಣ?