ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಬಯಸುತ್ತೇವೆ : ವಿಕ್ರಮಸಿಂಘೆ

Public TV
1 Min Read
ranil wickremesinghe

ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಅವಧಿಯಲ್ಲಿ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ದೇಶವು ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದೇಶಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಗುರುವಾರ ಶ್ರೀಲಂಕಾದ 26ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸ್ಥಿರಗೊಳಿಸಲು ಮತ್ತು ರಾಜಕೀಯ ಪ್ರಕ್ಷುಬ್ಧತೆಗೆ ಅಂತ್ಯ ಹಾಡುವು ಭಾಗವಾಗಿ ಶ್ರೀಲಂಕಾದಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

modi 1 1

ಪ್ರಮಾಣ ವಚನ ಸ್ವೀಕರಿಸಿದ ನಂತರ ನಿನ್ನೆ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಮಗೆ ಭಾರತದೊಂದಿಗೆ ಉತ್ತಮ ಬಾಂಧವ್ಯದ ಅಗತ್ಯವಿದೆ. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಆರ್ಥಿಕ ಬಿಕ್ಕಟ್ಟನ್ನು ನಿವಾರಿಸುವುದರ ಕಡೆಗಷ್ಟೇ ನಮ್ಮ ಗಮನ. ಜನರಿಗೆ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಪೂರೈಕೆಯನ್ನು ಖಾತ್ರಿಪಡಿಸಲು ಬಯಸುತ್ತೇನೆ ಎಂದು ಹೇಳಿದರು.  ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

SRILANKA

ಭಾರತವು ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಸಾಲಗಳು, ಕ್ರೆಡಿಟ್ ಲೈನ್‍ಗಳು ಮತ್ತು ಕ್ರೆಡಿಟ್ ಸ್ವಾಪ್‍ಗಳಂತಹ ಹಲವು ರೂಪಗಳಲ್ಲಿ 3 ಶತಕೋಟಿಗಿಂತ ಹೆಚ್ಚು ನೆರವು ನೀಡಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಅನುಗುಣವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಭಾರತ ಗುರುವಾರ ಹೇಳಿದೆ. ದ್ವೀಪ ರಾಷ್ಟ್ರದ ಜನರ ಬಗೆಗಿನ ಭಾರತದ ಬದ್ಧತೆ ಮುಂದುವರೆಯಲಿದೆ ಎಂದು ಹೇಳಿತ್ತು.

Share This Article
Leave a Comment

Leave a Reply

Your email address will not be published. Required fields are marked *